ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಛತ್ತೀಸಗಢದಲ್ಲಿ ನಟ ಸಾಹಿಲ್ ಖಾನ್ ಬಂಧಿಸಿದ ಎಸ್‌ಐಟಿ
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡವು (ಎಸ್ಐಟಿ) ನಟ ಸಾಹಿಲ್ ಖಾನ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ಎಸ್‌ಐಟಿ ಇತ್ತೀಚೆಗಷ್ಟೇ ವಿಚಾರಣೆಗೆ ಒಳಪಡಿಸಿತ್ತು.

ಮುಂಬೈ: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡವು (ಎಸ್ಐಟಿ) ನಟ ಸಾಹಿಲ್ ಖಾನ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ನಟನನ್ನು ಶನಿವಾರ ಛತ್ತೀಸ್‌ಗಢದ ಜಗದಲ್‌ಪುರದಿಂದ ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ಎಸ್‌ಐಟಿ ಇತ್ತೀಚೆಗಷ್ಟೇ ವಿಚಾರಣೆಗೆ ಒಳಪಡಿಸಿತ್ತು.

ರಾಜ್ಯದ ಕೆಲವು ಹಣಕಾಸು ಮತ್ತು ರಿಯಲ್ ಎಸ್ಟೇಟ್ ಸಂಸ್ಥೆಗಳು ಮತ್ತು ವಿವಾದಿತ ಮಹದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರ ನಡುವಿನ ಹಣ ಅಕ್ರಮ ವಹಿವಾಟಿನ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಸಂಬಂಧ ಸಾಹಿಲ್ ಖಾನ್ ಸೇರಿದಂತೆ ಇತರ 31 ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಯುತ್ತಿದೆ.
15 ಕೋಟಿ ಸಾವಿರ ರೂ. ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಇಲ್ಲಿಯವರೆಗೆ ಒಬ್ಬನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆಯು ಆರೋಪಿಗಳ ಬ್ಯಾಂಕ್ ಖಾತೆಗಳು, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಎಲ್ಲ ತಾಂತ್ರಿಕ ಸಾಧನಗಳನ್ನು ಪರಿಶೀಲಿಸುವುದನ್ನು ಒಳಗೊಂಡಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಸ್ಟೈಲ್', 'ಎಕ್ಸ್‌ಕ್ಯೂಸ್ ಮಿ' ಚಿತ್ರಗಳಿಗೆ ಹೆಸರಾದ ಸಾಹಿಲ್ ಖಾನ್ ಫಿಟ್‌ನೆಸ್ ಎಕ್ಸ್‌ಪರ್ಟ್ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



