ಬಿಹಾರ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸರ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ
ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದ ಕಂಟೈನರ್ ಟ್ರಕ್ ವ್ಯಾನ್‌ಗೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಹನ್ನೆರಡು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರ: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದ ಕಂಟೈನರ್ ಟ್ರಕ್ ವ್ಯಾನ್‌ಗೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಹನ್ನೆರಡು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯ ಮೂರನೇ ಹಂತದ ಕರ್ತವ್ಯಕ್ಕಾಗಿ ಪೊಲೀಸ್ ತಂಡ ಸುಪೌಲ್‌ಗೆ ತೆರಳುತ್ತಿದ್ದಾಗ ಮಧ್ಯಾಹ್ನ ಈ ಘಟನೆ ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ಪೊಲೀಸರನ್ನು ಕರೆದೊಯ್ಯುತ್ತಿದ್ದ ವ್ಯಾನ್ ಬರ್ಹಿಮಾ ಬಜಾರ್ ಬಳಿ ನಿಂತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದಿದೆ. ಇಬ್ಬರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
"ಎಲ್ಲಾ ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಕಂಟೇನರ್ ನ್ನು ಸ್ಥಳೀಯ ಪೊಲೀಸರು ವಶಪಡಿಸಿಕೊಂಡಿದ್ದಾರೆ" ಎಂದು ಗೋಪಾಲ್‌ಗಂಜ್‌ನ ಪೊಲೀಸ್ ಅಧೀಕ್ಷಕರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


