ದೇಶ

ಪತಂಜಲಿ ದಿವ್ಯ ಫಾರ್ಮಸಿಯ 10 ಉತ್ಪನ್ನಗಳ ಪರವಾನಗಿ ರದ್ದು!

ಪತಂಜಲಿ ಸಂಸ್ಥೆಯ ದಿವ್ಯ ಫಾರ್ಮಸಿಯ 10 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ.

ಪತಂಜಲಿ ದಿವ್ಯ ಫಾರ್ಮಸಿಯ 10 ಉತ್ಪನ್ನಗಳ ಪರವಾನಗಿ ರದ್ದು!
ವಿಮಾನ ನಿಲ್ದಾಣಗಳಲ್ಲಿ ಪತಂಜಲಿ ಉತ್ಪನ್ನಗಳ ಮಳಿಗೆ ಶೀಘ್ರ ಪ್ರಾರಂಭ — ಪತಂಜಲಿ ಉತ್ಪನ್ನಗಳು (ಸಾಂಕೇತಿಕ ಚಿತ್ರ)
Published On :

ಡೆಹ್ರಾಡೂನ್: ಪತಂಜಲಿ ಸಂಸ್ಥೆಯ ದಿವ್ಯ ಫಾರ್ಮಸಿಯ 10 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಉತ್ತರಾಖಂಡ್ ಔಷಧ ಪರವಾನಗಿ ಪ್ರಾಧಿಕಾರ ಪತಂಜಲಿ ಸಂಸ್ಥೆಯ ಪರವಾನಗಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಈ ಉತ್ಪನ್ನಗಳಿಗೆ ಸಂಬಂಧಿಸಿದಂತೆ ದಾರಿ ತಪ್ಪಿಸುವ ಜಾಹಿರಾತುಗಳನ್ನು ಪ್ರಕಟಿಸಿದ್ದರ ಬಗ್ಗೆ ದೂರುಗಳು ದಾಖಲಾಗಿದ್ದವು. ಇದನ್ನು ಪರಿಗಣಿಸಿ ಆದೇಶ ಪ್ರಕಟಿಸಲಾಗಿದೆ. ಜಾಹಿರಾತುಗಳು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ ಮತ್ತು ಡ್ರಗ್ಸ್ ಮತ್ತು ಕಾಸ್ಮೆಟಿಕ್ ಕಾಯ್ದೆಯನ್ನು ಉಲ್ಲಂಘನೆ ಮಾಡುತ್ತವೆ.

ಉತ್ಪನ್ನಗಳಿಗೆ ಸಂಬಂಧಿಸಿದಂತೆ ಸಂಸ್ಥೆಯು ತನ್ನಿಂದ ಕೇಳಲಾದ ಮಾಹಿತಿಯನ್ನು ಒದಗಿಸಿಲ್ಲ ಮತ್ತು ಅದರ ರಕ್ಷಣೆಗಾಗಿ ನೀಡಿದ ವಿವರಣೆ ತೃಪ್ತಿಕರವಾಗಿಲ್ಲ ಎಂದು ಪ್ರಾಧಿಕಾರವು ತನ್ನ ಆದೇಶದಲ್ಲಿ ತಿಳಿಸಿದೆ.

ಆದೇಶದ ಪ್ರಕಾರ, ದಿವ್ಯಾ ಫಾರ್ಮಸಿ ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದ್ದು, ಈ ಪೈಕಿ ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಲೇಹ, ಮುಕ್ತ ವತಿ ಎಕ್ಸ್‌ಟ್ರಾ ಪವರ್, ಲಿಪಿಡಮ್, ಬಿಪಿ ಗ್ರಿಟ್, ಮಧುಗ್ರಿಟ್ ಮತ್ತು ಮಧುನಾಶಿನಿ ವಟಿ ಎಕ್ಸ್‌ಟ್ರಾ ಪವರ್ ಉತ್ಪನ್ನಗಳು ಸೇರಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.