ಕೋಟಾದಲ್ಲಿ NEET ಆಕಾಂಕ್ಷಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
ವೃತ್ತಿ ಪರ ಶಿಕ್ಷಣ ಪರೀಕ್ಷೆಗಳಿಗೆ ತಯಾರಿ ನಡೆಸುವ ಕೋಚಿಂಗ್ ಹಬ್ ಎಂದೇ ಖ್ಯಾತಿಯಾಗಿರುವ ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೋಟ: ವೃತ್ತಿ ಪರ ಶಿಕ್ಷಣ ಪರೀಕ್ಷೆಗಳಿಗೆ ತಯಾರಿ ನಡೆಸುವ ಕೋಚಿಂಗ್ ಹಬ್ ಎಂದೇ ಖ್ಯಾತಿಯಾಗಿರುವ ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕುನ್ಹಾರಿ ಪ್ರದೇಶದಲ್ಲಿನ ಹಾಸ್ಟೆಲ್ ರೂಮ್ ನಲ್ಲಿ ಎನ್ಇಇಟಿ ಆಕಾಂಕ್ಷಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವಿದ್ಯಾರ್ಥಿಯ ಪೋಷಕರು ಆತನದ್ದು ಹತ್ಯೆ ಎಂದು ಶಂಕಿಸಿದ್ದಾರೆ.
ಜನವರಿ ತಿಂಗಳಿನಿಂದ ಈ ಭಾಗದಲ್ಲಿ ವಿದ್ಯಾರ್ಥಿಗಳ ಪೈಕಿ ವರದಿಯಾಗಿರುವ 8 ನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. 2023 ರಲ್ಲಿ ಕೋಟಾದಲ್ಲಿ 26 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು. ಹರ್ಯಾಣದ ರೋಹ್ಟಕ್ ಮೂಲದ ಸುಮಿತ್ ಪಾಂಚಾಲ್ ಎನ್ಇಇಟಿಗೆ ತರಬೇತಿ ಪಡೆಯುವುದಕ್ಕಾಗಿ ಕೋಚಿಂಗ್ ಕೇಂದ್ರಕ್ಕೆ ಸೇರಿದ್ದರು ಒಂದು ವರ್ಷದಿಂದ ತರಬೇತಿ ಪಡೆಯುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆತನ ಪೋಷಕರು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಯ ಪೋಷಕರ ಬೇಡಿಕೆಯ ಮೇರೆಗೆ ಶವಪರೀಕ್ಷೆ ನಡೆಸಲು ವೈದ್ಯಕೀಯ ಮಂಡಳಿಯನ್ನು ರಚಿಸಲಾಗಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಸಹಾಯಕ ಸಬ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



