ದೇಶ

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಅಧಿಕಾರಿಗಳ ಪಾತ್ರದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತಡೆ
ಸುಪ್ರೀಂ ಕೋರ್ಟ್
Published On :

ನವದೆಹಲಿ: 26 ಸಾವಿರ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಅಧಿಕಾರಿಗಳ ಪಾತ್ರದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ಸರ್ಕಾರಿ ಮತ್ತು ರಾಜ್ಯ ಅನುದಾನಿತ ಶಾಲೆಗಳಲ್ಲಿ 25,753 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಯನ್ನು ರದ್ದುಗೊಳಿಸಿದ್ದ ಹೈಕೋರ್ಟ್,

ಸಿಬಿಐ ತಿನಿಖೆಗೊಳಪಡಿಸುವಂತೆ ಆದೇಶಿಸಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರವು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠ, ಸಿಬಿಐ ತನಿಖೆಗೆ ತಡೆ ನೀಡಿದ್ದು, ಮೇ 6 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.

"ರಾಜ್ಯ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ(ಕೇಂದ್ರ ತನಿಖಾ ದಳ) ಹೆಚ್ಚಿನ ತನಿಖೆಯನ್ನು ಕೈಗೊಳ್ಳುತ್ತದೆ ಎಂದು ಹೇಳುವ ನಿರ್ದೇಶನವನ್ನು ನಾವು ತಡೆಹಿಡಿಯುತ್ತೇವೆ" ಎಂದು ಸುಪ್ರೀಂ ಪೀಠ ಹೇಳಿದೆ.

ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಶಬ್ಬರ್ ರಾಶೀದಿ ಅವರ ವಿಭಾಗೀಯ ಪೀಠವು ಆಯ್ಕೆಯಾದ ಅಭ್ಯರ್ಥಿಗಳು ಮುಂದಿನ ನಾಲ್ಕು ವಾರಗಳಲ್ಲಿ ಅವರು ಪಡೆದ ಸಂಪೂರ್ಣ ವೇತನವನ್ನು ಶೇ 12ರ ವಾರ್ಷಿಕ ಬಡ್ಡಿಯೊಂದಿಗೆ ಹಿಂದಿರುಗಿಸಬೇಕು ಎಂದು ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.