ಛತ್ತೀಸ್‌ಗಢ: ಭದ್ರತಾ ಸಿಬ್ಬಂದಿ ಕಾರ್ಯಾಚರಣೆ, ಏಳು ನಕ್ಸಲೀಯರ ಹತ್ಯೆ
ಗುಂಡಿನ ಚಕಮಕಿ ನಿಂತ ನಂತರ, ಇಬ್ಬರು ಮಹಿಳೆಯರು ಸೇರಿದಂತೆ ಏಳು ನಕ್ಸಲೀಯರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ. ಸ್ಥಳದಿಂದ ಎಕೆ-47 ರೈಫಲ್, ಇತರ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸಂಗ್ರಹವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಭಾಗದ ಅರಣ್ಯದಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಏಳು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 15 ದಿನಗಳಲ್ಲಿ ಭದ್ರತಾ ಪಡೆಗಳು ನಕ್ಸಲೀಯರ ಮೇಲೆ ನಡೆಸಿದ ಎರಡನೇ ಪ್ರಮುಖ ದಾಳಿ ಇದಾಗಿದೆ. ನಕ್ಸಲೀಯರ ಭದ್ರಕೋಟೆ ಎಂದು ಪರಿಗಣಿಸಲಾದ ಅಬುಜ್ಮದ್ ಪ್ರದೇಶದ ಟೆಕ್ಮೆಟಾ ಮತ್ತು ಕಾಕೂರ್ ಗ್ರಾಮಗಳ ನಡುವಿನ ಕಾಡಿನಲ್ಲಿ ಬೆಳಿಗ್ಗೆ 6 ಗಂಟೆಗೆ ಹೊತ್ತಿಗೆ ಜಿಲ್ಲಾ ಮೀಸಲು ಗಾರ್ಡ್ (DRG) ಮತ್ತು ವಿಶೇಷ ಕಾರ್ಯಪಡೆ (STF) ಜಂಟಿ ತಂಡವು ಹೊರಹೋಗಿದ್ದ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆಯಿತು. ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ಚಕಮಕಿ ನಿಂತ ನಂತರ, ಇಬ್ಬರು ಮಹಿಳೆಯರು ಸೇರಿದಂತೆ ಏಳು ನಕ್ಸಲೀಯರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ. ಸ್ಥಳದಿಂದ ಎಕೆ-47 ರೈಫಲ್, ಇತರ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸಂಗ್ರಹವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಹತ್ಯೆಯಾದ ನಕ್ಸಲೀಯರ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಘಟನೆಯೊಂದಿಗೆ, ನಾರಾಯಣಪುರ ಮತ್ತು ಕಂಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ರಾಜ್ಯದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈ ವರ್ಷ ಇದುವರೆಗೆ 88 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 16 ರಂದು ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 29 ನಕ್ಸಲೀಯರನ್ನು ಹೊಡೆದುರುಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



