ಜಾರ್ಖಂಡ್: ಕನ್ವರ್ ಯಾತ್ರಾರ್ಥಿಗಳ ವಾಹನಕ್ಕೆ ವಿದ್ಯುತ್ ತಗುಲಿ ಐವರು ಸಾವು
ಕನ್ವರ್ ಯಾತ್ರೆ ವೇಳೆ ವಿದ್ಯುತ್ ತಗುಲಿ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲತೇಹಾರ್: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಕನ್ವರ್ ಯಾತ್ರಾರ್ಥಿಗಳು ತೆರಳುತ್ತಿದ್ದ ವಾಹನಕ್ಕೆ ಹೈಟೆನ್ಷನ್ ಓವರ್‌ಹೆಡ್ ತಂತಿ ತಗುಲಿ ಐವರು ಯಾತ್ರಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.
ಕನ್ವರ್ ಯಾತ್ರೆ ವೇಳೆ ವಿದ್ಯುತ್ ತಗುಲಿ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಾಳುಮಠ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ ತಂ ತೋಲದಲ್ಲಿ ಈ ಘಟನೆ ನಡೆದಿದೆ. ಯಾತ್ರಿಕರು ದಿಯೋಘರ್‌ನ ಬಾಬಾ ಬೈದ್ಯನಾಥ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಅವರ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
"ಯಾತ್ರಿಕರ ವಾಹನದ ಮೇಲೆ ಹೈಟೆನ್ಷನ್ ಓವರ್ಹೆಡ್ ವೈರ್ ಬಿದ್ದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ" ಎಂದು ಬಾಲುಮಠ ಉಪವಿಭಾಗದ ಪೊಲೀಸ್ ಅಧಿಕಾರಿ ಅಶುತೋಷ್ ಕುಮಾರ್ ಸತ್ಯಂ ಅವರು ಪಿಟಿಐಗೆ ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



