ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ಹೇಳಿಕೆ
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ನವದೆಹಲಿ: 'ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ' ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ?
ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು' ಎಂದು ಕಿಡಿಕಾರಿದ್ದಾರೆ.
ಮುಂದುವರಿದು, 'ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದು ನನಗನಿಸುತ್ತದೆ' ಎಂದಿದ್ದಾರೆ.
'ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ, ಆತನನ್ನು ಮಾದಕ ದ್ರವ್ಯ ಸೇವನೆ ಪರೀಕ್ಷೆಗೊಳಪಡಿಸಬೇಕು ಎನಿಸುವುದಿಲ್ಲವೇ? ಅವರು ಸಂಸತ್ತಿಗೆ ಮದ್ಯ ಸೇವಿಸಿ ಅಥವಾ ಮಾದಕ ದ್ರವ್ಯದ ಮತ್ತಿನಲ್ಲೇ ಬರುತ್ತಾರೆ. ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



