ಮಹಾರಾಷ್ಟ್ರ: ಕಾರು ಡಿಕ್ಕಿ ಹೊಡೆದು ಪ್ರೊಫೆಸರ್ ಸಾವು, ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ
ಗುರುವಾರ ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರ ಸಾವಿಗೆ ಕಾರಣರಾದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ್ಮಜ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೆಲವು ಗಂಟೆಗಳ ನಂತರ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅಪಘಾತದ ಸಮಯದಲ್ಲಿ ಕಾರು ಚಾಲಕ ಶುಭಂ ಪ್ರತಾಪ್ ಪಾಟೀಲ್ ಪಾನಮತ್ತನಾಗಿದ್ದ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿರುವುದಾಗಿ ಹಿರಿಯ ಇನ್ಸ್‌ಪೆಕ್ಟರ್ ವಿಜಯ್ ಪಾಟೀಲ್ ಹೇಳಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ ಮತ್ತು ಮೋಟಾರು ವಾಹನ ಕಾಯ್ದೆಯಡಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



