ನವದೆಹಲಿ: ಶಾಲೆಗೆ ಬಾಂಬ್ ಬೆದರಿಕೆ ಸಂದೇಶ; 14 ವರ್ಷದ ಬಾಲಕನ ಬಂಧನ
ಶಾಲೆಗೆ ಹೋಗಲು ಇಷ್ಟಪಡದೆ ಸಂಬಂಧಿಕರ ಇಮೇಲ್ ಐಡಿ ಬಳಸಿಕೊಂಡು ಶಾಲೆಯ ಆಡಳಿತಕ್ಕೆ ಬಾಂಬ್ ಬೆದರಿಕೆ ಕಳುಹಿಸಿದ್ದಾನೆ

ನವದೆಹಲಿ: ತರಗತಿಗೆ ಹೋಗುವುದರಿಂದ ತಪ್ಪಿಸಿಕೊಳ್ಳಲು ತನ್ನ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ 14 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ 12.30ರ ಸುಮಾರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದರಿಂದ ಖಾಸಗಿ ಶಾಲೆಯಲ್ಲಿ ಆತಂಕ ಮನೆ ಮಾಡಿತ್ತು.
ಕೂಡಲೇ ಪೊಲೀಸರನ್ನು ಕರೆಸಿ ಬಾಂಬ್ ಮತ್ತು ಶ್ವಾನ ದಳದಿಂದ ಕೂಲಂಕಷ ತಪಾಸಣೆ ನಡೆಸಲಾಯಿತು. ದಕ್ಷಿಣ ದೆಹಲಿಯ ಇನ್ನೂ ಎರಡು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಸಂದೇಶ ಕಳುಹಿಸಲಾಗಿತ್ತು.
ಸಂದೇಶ ಕಳುಹಿಸಿದವರು ಪಾಕಿಸ್ತಾನಿ ಜನರಲ್ ಎಂದು ಕೂಡ ಹೇಳಲಾಗಿತ್ತು. ಬಾಲಕನನ್ನು ಶನಿವಾರ ಬಂಧಿಸಲಾಗಿದೆ. ಆತ ಸಂಬಂಧಿಕರ ಇಮೇಲ್ ಖಾತೆಯ ಮೂಲಕ ಶಾಲಾ ಆಡಳಿತಕ್ಕೆ ಮೇಲ್ ಕಳುಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇತರ ಎರಡು ಶಾಲೆಗಳಲ್ಲಿಯೂ ತಪಾಸಣೆ ನಡೆಸಲಾಯಿತು. ಆದರೆ ಮೂರರಲ್ಲಿ ಎಲ್ಲಿಯೂ ಅನುಮಾನಾಸ್ಪದ ವಸ್ತುಗಳು ಕಂಡುಬರಲಿಲ್ಲ. ವಿಚಾರಣೆಯ ಸಮಯದಲ್ಲಿ, ಮರುದಿನ ಶಾಲೆಗೆ ಹೋಗಲು ಇಷ್ಟಪಡದೆ ಸಂಬಂಧಿಕರ ಇಮೇಲ್ ಐಡಿ ಬಳಸಿಕೊಂಡು ಶಾಲೆಯ ಆಡಳಿತಕ್ಕೆ ಬಾಂಬ್ ಬೆದರಿಕೆ ಕಳುಹಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಲಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



