ವಯನಾಡು ಭೂಕುಸಿತ ಪ್ರದೇಶಕ್ಕೆ ನಟ ಮೋಹನ್ ಲಾಲ್ ಭೇಟಿ; ಪುನರ್ವಸತಿ ಕಾರ್ಯಕ್ಕೆ 3 ಕೋಟಿ ರೂ. ನೆರವು ಘೋಷಣೆ
ಚೂರಲ್ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ ಅವರು, ಸೇನೆ ಮತ್ತು ಸ್ಥಳೀಯರು ಸೇರಿದಂತೆ ವಿವಿಧ ರಕ್ಷಣಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಘಟನೆಯ ತೀವ್ರತೆಯ ಬಗ್ಗೆ ಮಾಹಿತಿ ಪಡೆದರು.

ವಯನಾಡು: ಭಾರತೀಯ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿರುವ ಖ್ಯಾತ ನಟ ಮೋಹನ್ ಲಾಲ್ ಅವರು ಶನಿವಾರ ಭೂಕುಸಿತ ಪೀಡಿತ ವಯನಾಡ್‌ಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವಿಪತ್ತು ಪೀಡಿತ ಪ್ರದೇಶದಲ್ಲಿ ಪುನರ್ವಸತಿ ಕಾರ್ಯಕ್ಕಾಗಿ ರೂ.3 ಕೋಟಿ ಆರ್ಥಿಕ ನೆರವನ್ನು ಪ್ರಕಟಿಸಿದ್ದಾರೆ.
ಸೇನಾ ಸಮವಸ್ತ್ರದಲ್ಲಿ ಮೆಪ್ಪಾಡಿಯ ಸೇನಾ ಶಿಬಿರಕ್ಕೆ ಆಗಮಿಸಿದ ನಟ, ಅಧಿಕಾರಿಗಳೊಂದಿಗೆ ಕೆಲಹೊತ್ತು ಚರ್ಚೆ ನಡೆಸಿದರು. ಬಳಿಕ ಭೂಕುಸಿತ ಪೀಡಿತ ಪ್ರದೇಶಕ್ಕೆ ತೆರಳಿದರು. ಚೂರಲ್ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ ಅವರು, ಸೇನೆ ಮತ್ತು ಸ್ಥಳೀಯರು ಸೇರಿದಂತೆ ವಿವಿಧ ರಕ್ಷಣಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಘಟನೆಯ ತೀವ್ರತೆಯ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮೋಹನ್‌ಲಾಲ್, ಅನಾಹುತದ ಪ್ರಮಾಣವನ್ನು ನೇರವಾಗಿ ವೀಕ್ಷಿಸಿದರೆ ಮಾತ್ರ ಅರ್ಥವಾಗುತ್ತದೆ. ಸೇನೆ, ನೌಕಾಪಡೆ, ವಾಯುಪಡೆ, ಎನ್‌ಡಿಆರ್‌ಎಫ್, ಅಗ್ನಿಶಾಮಕ ಮತ್ತು ರಕ್ಷಣಾ, ಇತರ ಸಂಸ್ಥೆಗಳು, ಸ್ಥಳೀಯರು ಮುಂತಾದವರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದರು.
ತಾನು ಕೂಡಾ ಭಾಗವಾಗಿರುವ ವಿಶ್ವಶಾಂತಿ ಪ್ರತಿಷ್ಠಾನ ಪುನರ್ವಸತಿ ಕಾರ್ಯಗಳಿಗೆ 3 ಕೋಟಿ ರೂಪಾಯಿಗಳನ್ನು ನೀಡಲು ನಿರ್ಧರಿಸಿದೆ. ಅಗತ್ಯವಿದ್ದರೆ ಹೆಚ್ಚಿನ ಹಣವನ್ನು ಒದಗಿಸಲಾಗುವುದು ಎಂದು ನಟ ಹೇಳಿದರು.
ನಟನಿಗೆ 2009 ರಲ್ಲಿ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿದೆ. ಈ ಮಧ್ಯೆ ಮೋಹನ್‌ಲಾಲ್ ಅವರೊಂದಿಗೆ ಬಂದ ಚಲನಚಿತ್ರ ನಿರ್ದೇಶಕ ಮೇಜರ್ ರವಿ, ಪಾಳುಬಿದ್ದಿರುವ ಮುಂಡಕ್ಕಾಯ್ ಶಾಲೆಯನ್ನು ಪ್ರತಿಷ್ಠಾನವ ಪುನರ್ನಿರ್ಮಿಸುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



