ದೇಶ

ಮಹಿಳಾ ಅರಣ್ಯಾಧಿಕಾರಿಗೆ ಬೆದರಿಕೆ: ಬಂಗಾಳದ ಸಚಿವ ರಾಜೀನಾಮೆ!

ಅಖಿಲ್ ಗಿರಿ ಅವರು ಅರಣ್ಯ ಸಂರಕ್ಷಣಾಧಿಕಾರಿ ಮನೀಶಾ ಸಾಹು ಅವರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಮಹಿಳಾ ಅರಣ್ಯಾಧಿಕಾರಿಗೆ ಬೆದರಿಕೆ: ಬಂಗಾಳದ ಸಚಿವ ರಾಜೀನಾಮೆ!
ಅಖಿಲ್ ಗಿರಿ
Published On :

ಕೋಲ್ಕತ್ತ: ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪಶ್ಚಿಮ ಬಂಗಾಳದ ಜೈಲು ಸಚಿವ ಅಖಿಲ್ ಗಿರಿ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ.

ರಾಮನಗರದ ಶಾಸಕರಾಗಿರುವ ಗಿರಿ ಅವರು ಅರಣ್ಯ ಸಂರಕ್ಷಣಾಧಿಕಾರಿ ಮನೀಶಾ ಸಾಹು ಅವರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ತದನಂತರ ಸಚಿವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹಾಗೂ ಮಹಿಳಾ ಅಧಿಕಾರಿ ಬಳಿ ಕ್ಷಮೆಯಾಚಿಸುವಂತೆ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸೂಚಿಸಲಾಗಿತ್ತು.

ಪುರ್ಬಾ ಮೇದಿನಿಪುರ ಜಿಲ್ಲೆಯ ಕಂಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಿರಿ, ರಾಜೀನಾಮೆ ನೀಡುತ್ತೇನೆ ಆದರೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದರು. ತಾಜ್‌ಪುರ ಬಳಿಯ ಬೀಚ್ ಬಳಿ ಅರಣ್ಯ ಇಲಾಖೆಯ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಿದ ನಂತರ ಅವರ ಸೇವಾವಧಿಯನ್ನು ಕಡಿತಗೊಳಿಸುವುದಾಗಿ ಸಚಿವರು ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದರು.

ಪಕ್ಷದ ಸೂಚನೆಯಂತೆ ರಾಜ್ಯಾಧ್ಯಕ್ಷ ಸುಬ್ರತಾ ಬಕ್ಷಿ ಅವರು ಭಾನುವಾರ ಮಧ್ಯಾಹ್ನ ಅಖಿಲ್ ಗಿರಿಗೆ ಕರೆ ಮಾಡಿ, ಮಹಿಳಾ ಅಧಿಕಾರಿಗೆ ಕ್ಷಮೆಯಾಚಿಸುವಂತೆ ಮತ್ತು ತಕ್ಷಣವೇ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿದರು ಎಂದು ಟಿಎಂಸಿ ವಕ್ತಾರ ಶಾಂತನು ಸೇನ್ ತಿಳಿಸಿದರು.

ಇಂದು ರಾತ್ರಿ ನನ್ನ ರಾಜೀನಾಮೆಯನ್ನು ಇಮೇಲ್ ಮಾಡುತ್ತೇನೆ. ನಾಳೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ವೈಯಕ್ತಿಕವಾಗಿ ಹಸ್ತಾಂತರಿಸುತ್ತೇನೆ" ಎಂದು ಅಲಿಖ್ ಗಿರಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.