ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್- ಕಾರು ಡಿಕ್ಕಿ: ಅಪಘಾತದಲ್ಲಿ 7 ಸಾವು, 25 ಜನರಿಗೆ ಗಾಯ
ನಾಗಾಲ್ಯಾಂಡ್ ನಂಬರ್ ಪ್ಲೇಟ್ ಹೊಂದಿರುವ ಬಸ್ ರಾಯ್ ಬರೇಲಿಯಿಂದ ದೆಹಲಿಗೆ ತೆರಳುತ್ತಿದ್ದಾಗ ಮಧ್ಯರಾತ್ರಿ 12.45 ರ ಸುಮಾರಿಗೆ ರಾಂಗ್ ಲೇನ್ ನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನವದೆಹಲಿ: ಆಗ್ರಾ– ಲಖನೌ ಎಕ್ಸ್‌ಪ್ರೆಸ್ ವೇ ನಲ್ಲಿ ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ.
ನಾಗಾಲ್ಯಾಂಡ್ ನಂಬರ್ ಪ್ಲೇಟ್ ಹೊಂದಿರುವ ಬಸ್ ರಾಯ್ ಬರೇಲಿಯಿಂದ ದೆಹಲಿಗೆ ತೆರಳುತ್ತಿದ್ದಾಗ ಮಧ್ಯರಾತ್ರಿ 12.45 ರ ಸುಮಾರಿಗೆ ರಾಂಗ್ ಲೇನ್ ನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಸ್‌ನಲ್ಲಿ 60 ಪ್ರಯಾಣಿಕರಿದ್ದರು ಅದರಲ್ಲಿ ನಾಲ್ವರು ಮೃತಪಟ್ಟಿದ್ದು 20–25 ಜನ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಸ್‌ನಲ್ಲಿದ್ದ ಉಳಿದ ಪ್ರಯಾಣಿಕರನ್ನು ಇತರ ವಾಹನ ವ್ಯವಸ್ಥೆ ಮಾಡಿ ಅವರ ಸ್ಥಳಗಳಿಗೆ ಕಳುಹಿಸಲಾಗಿದೆ. ಕಾರು ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದೂ ಅವರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ-ಮೀರತ್ ಎಕ್ಸ್ಪ್ರೆಸ್ವೇ ಭೀಕರ ಅಪಘಾತ: ಒನ್ ವೇನಲ್ಲಿ ಬಂದ ಕಾರು ಬೈಕ್ಗೆ ಡಿಕ್ಕಿ, ತಾಯಿ-ಮಗ ದುರ್ಮರಣ; ವಿಡಿಯೋ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


