ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭ

5 ಆಗಸ್ಟ್ 2019 ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತೀಯ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದು. ವಿಶೇಷ ಸ್ಥಾನಮಾನ ರದ್ದುಗೊಂಡು ಇಂದಿಗೆ 5 ವರ್ಷ ಕಳೆದಿದೆ.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭ
ಸಂಗ್ರಹ ಚಿತ್ರ
Published On :

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಮತ್ತು ಸುಂದರ್‌ಬಾನಿ ಸೆಕ್ಟರ್‌ಗಳ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶಸ್ತ್ರ ಸಜ್ಜಿತ ನಸುಳುಕೋರರು ಹಾಗೂ ಗಡಿ ಭದ್ರತಾ ಪಡೆ ಸಿಬ್ಬಂದಿ ನಡುವೆ ಸೋಮವಾರ ಗುಂಡಿನ ಕಾಳಗ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಡಿಯುದ್ದಕ್ಕೂ ನುಸುಳುಕೋರರ ಎರಡು ಗುಂಪುಗಳ ಚಲನವಲನವನ್ನು ಗಮನಿಸಿದ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿವೆ. ಎರಡೂ ಪ್ರದೇಶಗಳಲ್ಲಿ ಇದೀಗ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಂದು ಮುಂಜಾನೆ 1.30 ರ ಸುಮಾರಿಗೆ ಜಮ್ಮುವಿನ ಹೊರವಲಯದಲ್ಲಿರುವ ಅಖ್ನೂರ್‌ನ ಬತ್ತಲ್ ಸೆಕ್ಟರ್‌ನಲ್ಲಿ ಮೂರರಿಂದ ನಾಲ್ಕು ನುಸುಳುಕೋರರ ಅನುಮಾನಾಸ್ಪದ ಚಲನವಲನವನ್ನು ಪತ್ತೆಹಚ್ಚಿದ ನಂತರ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿದ್ದವು ಎಂದು ತಿಳಿಸಿದ್ದಾರೆ.

ನುಸುಳುಕೋರರು ಪತ್ತೆಯಾದ ಬೆನ್ನಲ್ಲೇ ಸ್ಥಳದಲ್ಲಿ ಡ್ರೋನ್‌ಗಳ ಮೂಲಕ ಕಣ್ಗಾವಲು ಹೆಚ್ಚಿಸಲಾಗಿದೆ. ಶೋಧಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ರಜೌರಿ ಜಿಲ್ಲೆಯ ಸುಂದರ್‌ಬನಿ-ನೌಶೇರಾ ಸೆಕ್ಟರ್‌ನಲ್ಲಿಯೂ ಮಧ್ಯರಾತ್ರಿ 12.30ರ ಸುಮಾರಿಗೆ ಅನುಮಾನಾಸ್ಪದ ಚಲನವಲನಗಳು ಕಂಡು ಬಂದಿತ್ತು. ಅಲ್ಲಿಯೂ ಸೇನಾ ಪಡೆಗಳು ಕೆಲವು ಸುತ್ತಿನ ಗುಂಡು ಹಾರಿಸಿವೆ ಎಂದು ತಿಳಿದುಬಂದಿದೆ.

ಎಲ್‌ಒಸಿಯ ಉದ್ದಕ್ಕೂ ಇರುವ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

5 ಆಗಸ್ಟ್ 2019 ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತೀಯ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದು. ವಿಶೇಷ ಸ್ಥಾನಮಾನ ರದ್ದುಗೊಂಡು ಇಂದಿಗೆ 5 ವರ್ಷ ಕಳೆದಿದ್ದು, ಇದರ ನಡುವಲ್ಲೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಮ್ಮು-ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.