ದೇಶ

ಕಾಶ್ಮೀರ: ಅನಂತನಾಗ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಕಾಶ್ಮೀರ: ಅನಂತನಾಗ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಅರಣ್ಯ ಪ್ರದೇಶದ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಕೊಕರ್ನಾಗ್ ಪ್ರದೇಶದ ಅಹ್ಲಾನ್ ಗಗರ್ಮಂಡು ಅರಣ್ಯದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಶೋಧ ಕಾರ್ಯಾಚರಣೆ ಆರಂಭಸಲಾಗಿತ್ತು. ಈ ವೇಳೆ ಉಗ್ರರೊಂದಿಗೆ ಗುಂಡಿನ ಕಾಳಗ ನಡೆದಿದೆ ಎಂದು ಅವರು ಹೇಳಿದ್ದಾರೆ.

ಅರಣ್ಯದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾ ಸಿಬ್ಬಂದಿಯನ್ನು ಗಮನಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಪ್ರದೇಶಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ರವಾನಿಸಲಾಗಿದ್ದು, ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

"ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು, ಕಾಶ್ಮೀರ ಪೊಲೀಸರು ಇಂದು ಕೊಕರ್ನಾಗ್, ಅನಂತನಾಗ್ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದರು. ಈ ವೇಳೆ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯಿತು" ಎಂದು ಭಾರತೀಯ ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.