ಹಿರಿಯ ಐಎಎಸ್ ಅಧಿಕಾರಿ ಟಿ ವಿ ಸೋಮನಾಥನ್ ಕೇಂದ್ರ ಸಂಪುಟ ಕಾರ್ಯದರ್ಶಿಯಾಗಿ ನೇಮಕ
30.08.2024 ರಿಂದ ಎರಡು ವರ್ಷಗಳ ಅವಧಿಗೆ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಟಿ ವಿ ಸೋಮನಾಥನ್ ಅವರನ್ನು ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.

ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಟಿ ವಿ ಸೋಮನಾಥನ್ ಅವರನ್ನು ಕೇಂದ್ರ ಸಂಪುಟ ಕಾರ್ಯದರ್ಶಿಯಾಗಿ ಶನಿವಾರ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ತಮಿಳುನಾಡು ಕೇಡರ್ನ 1987-ಬ್ಯಾಚ್ ಐಎಎಸ್ ಅಧಿಕಾರಿ, ಸೋಮನಾಥನ್ ಅವರನ್ನು ನೇಮಕ ಮಾಡಲಾಗಿದೆ.
ಸೋಮನಾಥನ್ ಅವರು ಪ್ರಸ್ತುತ ಕೇಂದ್ರ ಹಣಕಾಸು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
30.08.2024 ರಿಂದ ಎರಡು ವರ್ಷಗಳ ಅವಧಿಗೆ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಟಿ ವಿ ಸೋಮನಾಥನ್ ಅವರನ್ನು ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಗೌಬಾ ಅವರು ಐದು ವರ್ಷಗಳ ಹಿಂದೆ ಆಗಸ್ಟ್ 30, 2019 ರಂದು ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



