ನವದೆಹಲಿ: ರಾಜ್‌ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ ಸಿಸೋಡಿಯಾ
ಅಬಕಾರಿ ನೀತಿ ಹಗರಣ"ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಿಸೋಡಿಯಾಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿತು.

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲಿನಿಂದ ನಿನ್ನೆ ಬಿಡುಗಡೆಯಾದ ಎಎಪಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ರಾಜ್‌ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು. ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಅವರು ರಾಜ್ ಘಾಟ್ ತಲುಪಿದರು.
ಈ ವೇಳೆ ಸಂಸದ ಸಂಜಯ್ ಸಿಂಗ್, ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಸೇರಿದಂತೆ ಹಲವು ಎಎಪಿ ನಾಯಕರು ಸಿಸೋಡಿಯಾ ಜೊತೆಗಿದ್ದರು. ಅಬಕಾರಿ ನೀತಿ ಹಗರಣ"ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಿಸೋಡಿಯಾಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿತು.
ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಸೋಡಿಯಾ, ಹನುಮಂತನ ಆಶೀರ್ವಾದದಿಂದ ಈ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಅವರು ಆಶಿಸಿದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಡಿಡಿಯು ಮಾರ್ಗದಲ್ಲಿರುವ ಎಎಪಿ ಕೇಂದ್ರ ಕಚೇರಿಗೆ ಸಿಸೋಡಿಯಾ ಭೇಟಿ ನೀಡಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗಾಗಿ ಕಳೆದ ವರ್ಷ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



