ED ನೂತನ ನಿರ್ದೇಶಕರಾಗಿ 1993ರ ಬ್ಯಾಚ್ IRS ಅಧಿಕಾರಿ ರಾಹುಲ್ ನವೀನ್ ನೇಮಕ!
ರಾಹುಲ್ ನವೀನ್ ಭಾರತೀಯ ಕಂದಾಯ ಸೇವೆಯ (ಆದಾಯ ತೆರಿಗೆ) 1993ರ ಬ್ಯಾಚ್ ಅಧಿಕಾರಿ. ರಾಹುಲ್ 2023ರ ಸೆಪ್ಟೆಂಬರ್ 15ರಂದು ತನಿಖಾ ಸಂಸ್ಥೆಯ ಹಾಲಿ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು.

ನವದೆಹಲಿ: 1993ರ ಬ್ಯಾಚ್‌ನ ಭಾರತೀಯ ಕಂದಾಯ ಸೇವಾ ಅಧಿಕಾರಿ ರಾಹುಲ್ ನವೀನ್ ಅವರನ್ನು ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ರಾಹುಲ್ ಅವರ ನೇಮಕವು ತಾವು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರಲಿದೆ. ಇದು ಎರಡು ವರ್ಷಗಳ ಅವಧಿಗೆ ಮತ್ತು ಮುಂದಿನ ಆದೇಶಗಳನ್ನು ಹೊರಡಿಸುವವರೆಗೆ ಜಾರಿಯಲ್ಲಿರುತ್ತದೆ.
ರಾಹುಲ್ ನವೀನ್ ಭಾರತೀಯ ಕಂದಾಯ ಸೇವೆಯ (ಆದಾಯ ತೆರಿಗೆ) 1993ರ ಬ್ಯಾಚ್ ಅಧಿಕಾರಿ. ರಾಹುಲ್ 2023ರ ಸೆಪ್ಟೆಂಬರ್ 15ರಂದು ತನಿಖಾ ಸಂಸ್ಥೆಯ ಹಾಲಿ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರನ್ನು ಪ್ರಭಾರ ನಿರ್ದೇಶಕರಾಗಿ ನೇಮಿಸುವ ಮೊದಲು, ನವೀನ್ ಸಂಜಯ್ ಮಿಶ್ರಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದರು.
ದೇಶದ 120ಕ್ಕೂ ಹೆಚ್ಚು ರಾಜಕೀಯ ನಾಯಕರನ್ನು ಇಡಿ ತನಿಖೆ ನಡೆಸುತ್ತಿದೆ. ಅದರಲ್ಲಿ ಸುಮಾರು 95 ಪ್ರತಿಶತದಷ್ಟು ಮಂದಿ ವಿರೋಧ ಪಕ್ಷದವರೇ ಆಗಿದ್ದಾರೆ. ರಾಜಕೀಯ ನಾಯಕರ ವಿರುದ್ಧ ತನಿಖೆಗಾಗಿ ಇಡಿ ಆಗಾಗ್ಗೆ ವಿರೋಧ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



