ದೇಶ

RSSಗೆ ಹಿನ್ನಡೆ: IICC ಅಧ್ಯಕ್ಷೀಯ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಗೆಲುವು

ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಖುರ್ಷಿದ್ 721 ಮತಗಳನ್ನು ಪಡೆದಿದ್ದಾರೆ. ಇನ್ನು ಐಐಸಿಸಿಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಯತ್ನಿಸುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಆಘಾತವಾಗಿದೆ.

RSSಗೆ ಹಿನ್ನಡೆ: IICC ಅಧ್ಯಕ್ಷೀಯ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಗೆಲುವು
ಸಲ್ಮಾನ್ ಖುರ್ಷಿದ್ — TNIE
Published On :

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಖ್ಯಾತ ವಕೀಲ ಸಲ್ಮಾನ್ ಖುರ್ಷಿದ್ ಇಂಡಿಯಾ ಇಸ್ಲಾಮಿಕ್ ಕಲ್ಚರ್ ಸೆಂಟರ್ (IICC) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಖುರ್ಷಿದ್ 721 ಮತಗಳನ್ನು ಪಡೆದಿದ್ದಾರೆ. ಇನ್ನು ಐಐಸಿಸಿಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಯತ್ನಿಸುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಆಘಾತವಾಗಿದೆ. ಆರ್‌ಎಸ್‌ಎಸ್ ಬೆಂಬಲಿತ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ರಾಷ್ಟ್ರೀಯ ಸಂಚಾಲಕ ಮತ್ತು ಆಂಕೊಲಾಜಿಸ್ಟ್ ಡಾ. ಮಜೀದ್ ಅಹ್ಮದ್ ತಾಳಿಕೋಟಿ ಅವರು ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಮಜೀದ್ ಅಹ್ಮದ್ ಗೆ ಐಐಸಿಸಿ ಮಾಜಿ ಅಧ್ಯಕ್ಷ ಸಿರಾಜುದ್ದೀನ್ ಖುರೇಷಿ ಬೆಂಬಲವಿತ್ತು. ಆದಾಗ್ಯೂ, ತಾಳಿಕೋಟಿ ಕೇವಲ 227 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದರು. ಇನ್ನು ಖುರ್ಷಿದ್ ಅವರ ಹತ್ತಿರದ ಪ್ರತಿಸ್ಪರ್ಧಿ ಉದ್ಯಮಿ ಆಸಿಫ್ ಹಬೀಬ್ 278 ಮತಗಳನ್ನು ಪಡೆದರು.

13 ಸದಸ್ಯರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಖುರ್ಷಿದ್ ಅವರ ಸಮಿತಿಯಿಂದ ಕನಿಷ್ಠ ಎಂಟು ಅಭ್ಯರ್ಥಿಗಳು ಗೆದ್ದಿದ್ದಾರೆ. ಐಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ನನಗೆ ಅತೀವ ಗೌರವವಾಗಿದೆ. ನಿಮ್ಮ ವಿಶ್ವಾಸ ಮತ್ತು ಬೆಂಬಲಕ್ಕಾಗಿ ಎಲ್ಲಾ ಸದಸ್ಯರಿಗೆ ಧನ್ಯವಾದಗಳು. ಎಲ್ಲಾ ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಒಟ್ಟಾಗಿ, ನಾವು ಐಐಸಿಸಿಯ ಮೌಲ್ಯಗಳ ಸುಧಾರಣೆ ಮತ್ತು ಸಂರಕ್ಷಣೆಗಾಗಿ ಕೆಲಸ ಮಾಡುತ್ತೇವೆ ಎಂದು ಖುರ್ಷಿದ್ ಗೆಲುವಿನ ನಂತರ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅದೇ ಸಮಯದಲ್ಲಿ, ಎಂಡಿ ಫುರ್ಕನ್ ಖುರೇಷಿ 362 ಮತಗಳಿಂದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.