ದೇಶ

ಜಾರ್ಖಂಡ್: ಸಿಡಿಲು ಬಡಿದು ಮೂವರು ಉದಯೋನ್ಮುಖ ಹಾಕಿ ಆಟಗಾರರು ಸಾವು, ಐವರಿಗೆ ಗಾಯ

ಕೊಲೆಬೀರ ಪೊಲೀಸ್ ಠಾಣಾ ವ್ಯಾಪ್ತಿಯ ತುಟಿಕಲ್ ಪಂಚಾಯತ್‌ನ ಝಾಪ್ಲಾದಲ್ಲಿ ಆಟಗಾರರು ಹಾಕಿ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಜಾರ್ಖಂಡ್: ಸಿಡಿಲು ಬಡಿದು ಮೂವರು ಉದಯೋನ್ಮುಖ ಹಾಕಿ ಆಟಗಾರರು ಸಾವು, ಐವರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ರಾಂಚಿ: ರಾಜ್ಯದ ರಾಜಧಾನಿ ರಾಂಚಿಯಿಂದ ಸುಮಾರು 135 ಕಿಮೀ ದೂರದಲ್ಲಿರುವ ಸಿಮ್ಡೆಗಾದಲ್ಲಿ ಬುಧವಾರ ಸಂಜೆ ಸಿಡಿಲು ಬಡಿದು ಮೂವರು ಉದಯೋನ್ಮುಖ ಹಾಕಿ ಆಟಗಾರರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಕೊಲೆಬೀರ ಪೊಲೀಸ್ ಠಾಣಾ ವ್ಯಾಪ್ತಿಯ ತುಟಿಕಲ್ ಪಂಚಾಯತ್‌ನ ಝಾಪ್ಲಾದಲ್ಲಿ ಆಟಗಾರರು ಹಾಕಿ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಭಾರೀ ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ಆಶ್ರಯ ಪಡೆದಿದ್ದ ಆಟಗಾರರಿಗೆ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಎನೋಶ್, ಸೆನನ್ ಡ್ಯಾಂಗ್ ಮತ್ತು ನಿರ್ಮಲ್ ಹೋರೋ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಕ್ಲೆಮೆಂಟ್ ಬಾಗೇ, ಜೈಲೇಶ್ ಬಾಗೇ, ಸಲೀಂ ಬಾಗೇ, ಪೀಟರ್ ಬಾಗೇ ಮತ್ತು ಪತಿರಾಮ್ ಬಾಗೇ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಕೋಳೇಬೀರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.