ದೇಶ

ದೆಹಲಿ: ಏಮ್ಸ್‌ನ 34 ವರ್ಷದ ನ್ಯೂರೋ ಸರ್ಜನ್ ಆತ್ಮಹತ್ಯೆಗೆ ಶರಣು

ಗುಜರಾತ್‌ನ ರಾಜ್‌ಕೋಟ್‌ ನಿವಾಸಿಯಾಗಿರುವ ಡಾ. ರಾಜ್ ಘೋನಿಯಾ ಅವರು ಗೌತಮ್ ನಗರ ಪ್ರದೇಶದಲ್ಲಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿ: ಏಮ್ಸ್‌ನ 34 ವರ್ಷದ ನ್ಯೂರೋ ಸರ್ಜನ್ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಏಮ್ಸ್‌ನ 34 ವರ್ಷದ ನ್ಯೂರೋ ಸರ್ಜನ್ ಒಬ್ಬರು ತಮ್ಮ ದಕ್ಷಿಣ ದೆಹಲಿಯ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್‌ನ ರಾಜ್‌ಕೋಟ್‌ ನಿವಾಸಿಯಾಗಿರುವ ಡಾ. ರಾಜ್ ಘೋನಿಯಾ ಅವರು ಗೌತಮ್ ನಗರ ಪ್ರದೇಶದಲ್ಲಿನ ತಮ್ಮ ಮನೆಯಲ್ಲಿ ಔಷಧಗಳನ್ನು ಮಿತಿಮೀರಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಡೆತ್ ನೋಟ್ ಸಹ ವಶಪಡಿಸಿಕೊಳ್ಳಲಾಗಿದೆ. ಆದರೆ ಅದರಲ್ಲಿ ತಮ್ಮ ಸಾವಿಗೆ ಘೋನಿಯಾ ಅವರು ಯಾರನ್ನೂ ದೂರಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

"ಭಾನುವಾರ ಮಧ್ಯಾಹ್ನ 2 ಗಂಟೆಗೆ, ಗೌತಮ್ ನಗರ ಪ್ರದೇಶದಲ್ಲಿ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹೌಜ್ ಖಾಸ್ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿತು. ಪೊಲೀಸರು ಸ್ಥಳಕ್ಕೆ ತೆರಳಿದಾಗ ಘೋನಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘೋನಿಯಾ ಅವರನ್ನು ತಕ್ಷಣ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಎಐಐಎಂಎಸ್)ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಡಾ. ರಾಜ್ ಘೋನಿಯಾ ಅವರು ಏಮ್ಸ್‌ನ ಟ್ರಾಮಾ ಸೆಂಟರ್‌ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.