ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ ಮುಖ್ಯಸ್ಥ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಐಸಿಜಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪಾಲ್ ಅವರಿಗೆ ಹೃದಯಾಘಾತವಾಗಿದೆ.

ಚೆನ್ನೈ: ಭಾರತೀಯ ಕರಾವಳಿ ಪಡೆಯ ಡೈರೆಕ್ಟರ್ ಜನರಲ್ ರಾಕೇಶ್ ಪಾಲ್ ಅವರು ಹೃದಯಾಘಾತದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಐಸಿಜಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪಾಲ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸರ್ಕಾರಿ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ(ಆರ್ಜಿಜಿಹೆಚ್) ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಅವರು ಹೇಳಿದ್ದಾರೆ.
ತಮಿಳುನಾಡು ಸರ್ಕಾರ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ದಿ. ಎಂ ಕರುಣಾನಿಧಿ ಅವರ ಜನ್ಮ ಶತಮಾನೋತ್ಸವ ಸ್ಮರಣಾರ್ಥ ನಾಣ್ಯ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜನಾಥ್ ಸಿಂಗ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಪಾಲ್ ನಿಧನದ ಸುದ್ದಿ ಕೇಳಿ ಆಸ್ಪತ್ರೆಗೆ ಧಾವಿಸಿ, ಅಂತಿಮ ನಮನ ಸಲ್ಲಿಸಿದ್ದಾರೆ.
ಪಾಲ್ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



