ದೇಶ

ಬಿಜೆಪಿಯಿಂದ ನಮ್ಮ ಶಾಸಕರ ಖರೀದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಜೆಎಂಎಂ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ದೆಹಲಿ ತಲುಪಿದ ಕೆಲವೇ ಗಂಟೆಗಳ ನಂತರ ಹೇಮಂತ್ ಸೊರೆನ್ ಅವರ ಹೇಳಿಕೆ ಹೊರಬಿದ್ದಿದೆ.

ಬಿಜೆಪಿಯಿಂದ ನಮ್ಮ ಶಾಸಕರ ಖರೀದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್
ಹೇಮಂತ್ ಸೊರೆನ್
Published On :

ಗೊಡ್ಡಾ: ಜೆಎಂಎಂ ನಾಯಕ ಚಂಪೈ ಸೊರೆನ್ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ಮಧ್ಯೆ, ಕೇಸರಿ ಪಕ್ಷವು ನಮ್ಮ ಶಾಸಕರನ್ನು ಖರೀದಿಸುತ್ತಿದೆ ಮತ್ತು ಸಮಾಜವನ್ನು ವಿಭಜಿಸುತ್ತದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾನುವಾರ ಆರೋಪಿಸಿದ್ದಾರೆ.

ಜೆಎಂಎಂ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ದೆಹಲಿ ತಲುಪಿದ ಕೆಲವೇ ಗಂಟೆಗಳ ನಂತರ ಹೇಮಂತ್ ಸೊರೆನ್ ಹೇಳಿಕೆ ಹೊರಬಿದ್ದಿದೆ.

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಸರ್ಕಾರಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹೇಮಂತ್ ಸೊರೆನ್, ಬಿಜೆಪಿಯು ಗುಜರಾತ್, ಅಸ್ಸಾಂ ಮತ್ತು ಮಹಾರಾಷ್ಟ್ರದಿಂದ ಜನರನ್ನು ಕರೆತಂದಿದ್ದು, "ಆದಿವಾಸಿಗಳು, ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರನ್ನು ವಿಭಜಿಸಿ, ಪರಸ್ಪರ ಹೊಡೆದಾಡುವಂತೆ" ಮಾಡುತ್ತಿದೆ ಎಂದು ಆರೋಪಿಸಿದರು.

ಈ ಜನ, ಸಮಾಜ, ಕುಟುಂಬ ಮತ್ತು ಪಕ್ಷಗಳನ್ನು ಒಡೆಯುವ ಕೆಲಸ ಮಾಡುತ್ತಾರೆ. ಅವರು ಶಾಸಕರನ್ನು ಖರೀದಿಸುತ್ತಾರೆ. ಹಣವು ರಾಜಕಾರಣಿಗಳು ಇಲ್ಲಿಂದ ಅಲ್ಲಿಗೆ ಹೋಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಜೆಎಂಎಂ ತೊರೆದು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳ ನಡುವೆ ಅವರು ಇಂದು ದೆಹಲಿಗೆ ತೆರಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.