2018ರ ನಂತರ ಮೊದಲ ಬಾರಿಗೆ ಭಾರತಕ್ಕೆ ಮಲೇಷ್ಯಾ ಪ್ರಧಾನಿ ಭೇಟಿ
ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮಲೇಷ್ಯಾ ಪ್ರಧಾನಿ ದೆಹಲಿಗೆ ಆಗಮಿಸುತ್ತಿದ್ದಾರೆ. ಇದು ಮಲೇಷ್ಯಾ ಪ್ರಧಾನಿಯಾಗಿ ಅನ್ವರ್ ಬಿನ್ ಇಬ್ರಾಹಿಂ ಅವರ ಮೊದಲ ಭೇಟಿಯಾಗಿದೆ.

ನವದೆಹಲಿ: 2018ರ ನಂತರ ಮೊದಲ ಬಾರಿಗೆ ಮಲೇಷ್ಯಾ ಪ್ರಧಾನಿ ಅನ್ವರ್ ಬಿನ್ ಇಬ್ರಾಹಿಂ ಅವರು ಆಗಸ್ಟ್ 19 ಮತ್ತು 21 ರಂದು ಎರಡು ದಿನಗಳ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮಲೇಷ್ಯಾ ಪ್ರಧಾನಿ ದೆಹಲಿಗೆ ಆಗಮಿಸುತ್ತಿದ್ದಾರೆ. ಇದು ಮಲೇಷ್ಯಾ ಪ್ರಧಾನಿಯಾಗಿ ಅನ್ವರ್ ಇಬ್ರಾಹಿಂ ಅವರ ಮೊದಲ ಭೇಟಿಯಾಗಿದೆ.
ಮಂಗಳವಾರ, ಆಗಸ್ಟ್ 20 ರಂದು ಪ್ರಧಾನಿ ಅನ್ವರ್ ಬಿನ್ ಇಬ್ರಾಹಿಂ ಅವರನ್ನು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ವಿಧ್ಯುಕ್ತವಾಗಿ ಸ್ವಾಗತಿಸಲಾಗುತ್ತದೆ. ನಂತರ ಮಹಾತ್ಮಾ ಗಾಂಧಿ ಅವರಿಗೆ ಗೌರವ ಸಲ್ಲಿಸಲು ರಾಜ್ ಘಾಟ್‌ಗೆ ಭೇಟಿ ನೀಡಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
“ಭಾರತ ಮತ್ತು ಮಲೇಷ್ಯಾ ಬಲವಾದ ಐತಿಹಾಸಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಬಂಧಗಳನ್ನು ಹೊಂದಿವೆ. 2015 ರಲ್ಲಿ ಪ್ರಧಾನಿ ಮೋದಿಯವರ ಭೇಟಿಯ ಸಮಯದಲ್ಲಿ ನಮ್ಮ ದ್ವಿಪಕ್ಷೀಯ ಸಂಬಂಧವನ್ನು ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಾನಮಾನಕ್ಕೆ ಏರಿಸಲಾಯಿತು. ಅನ್ವರ್ ಇಬ್ರಾಹಿಂ ಅವರ ಭೇಟಿಯು ಭಾರತ-ಮಲೇಷ್ಯಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ದಾರಿ ಮಾಡಿಕೊಡುತ್ತದೆ” ಎಂದು ಎಂಇಎ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



