ದೇಶ

ರಾಜ್ಯಸಭಾ ಉಪಚುನಾವಣೆ: ಬಿಜೆಪಿಯಿಂದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು, ಜಾರ್ಜ್ ಕುರಿಯನ್ ಕಣಕ್ಕೆ

ಒಡಿಶಾದಿಂದ ಮಾಜಿ ಬಿಜೆಡಿ ನಾಯಕಿ ಮಮತಾ ಮೊಹಾಂತಾ, ಹರಿಯಾಣದಿಂದ ಮಾಜಿ ಕಾಂಗ್ರೆಸ್ ನಾಯಕಿ ಕಿರಣ್ ಚೌಧರಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ರಾಜ್ಯಸಭಾ ಉಪಚುನಾವಣೆ: ಬಿಜೆಪಿಯಿಂದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು, ಜಾರ್ಜ್ ಕುರಿಯನ್ ಕಣಕ್ಕೆ
ರವನೀತ್ ಸಿಂಗ್ ಬಿಟ್ಟು - ಜಾರ್ಜ್ ಕುರಿಯನ್
Published On :

ನವದೆಹಲಿ: ಸೆಪ್ಟೆಂಬರ್ 3 ರಂದು ನಡೆಯಲಿರುವ ರಾಜ್ಯಸಭೆಯ ಉಪಚುನಾವಣೆಗೆ ಬಿಜೆಪಿ ಮಂಗಳವಾರ ಒಂಬತ್ತು ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದು, ಕೇಂದ್ರ ಸಚಿವರಾದ ರವನೀತ್ ಸಿಂಗ್ ಬಿಟ್ಟು ಅವರನ್ನು ರಾಜಸ್ಥಾನದಿಂದ ಮತ್ತು ಜಾರ್ಜ್ ಕುರಿಯನ್ ಅವರನ್ನು ಮಧ್ಯಪ್ರದೇಶದಿಂದ ಕಣಕ್ಕಿಳಿಸಿದೆ.

ಒಡಿಶಾದಿಂದ ಮಾಜಿ ಬಿಜೆಡಿ ನಾಯಕಿ ಮಮತಾ ಮೊಹಾಂತಾ, ಹರಿಯಾಣದಿಂದ ಮಾಜಿ ಕಾಂಗ್ರೆಸ್ ನಾಯಕಿ ಕಿರಣ್ ಚೌಧರಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಈ ಇಬ್ಬರೂ ನಾಯಕರು ಇತ್ತೀಚೆಗೆ ಬಿಜೆಪಿ ಸೇರಿದ್ದರು.

ಬಿಜೆಪಿ ಬಿಡುಗಡೆ ಮಾಡಿರುವ ಒಂಬತ್ತು ಅಭ್ಯರ್ಥಿಗಳ ಪಟ್ಟಿಯಲ್ಲಿ, ಮನನ್ ಕುಮಾರ್ ಮಿಶ್ರಾ ಬಿಹಾರದಿಂದ, ಧೈರ್ಯಶೀಲ್ ಪಾಟೀಲ್ ಮಹಾರಾಷ್ಟ್ರದಿಂದ ಮತ್ತು ರಾಜೀಬ್ ಭಟ್ಟಾಚಾರ್ಯ ತ್ರಿಪುರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಭಟ್ಟಾಚಾರ್ಯ ಅವರು ಬಿಜೆಪಿಯ ತ್ರಿಪುರ ಘಟಕದ ಅಧ್ಯಕ್ಷರಾಗಿದ್ದಾರೆ. ಕೇಸರಿ ಪಕ್ಷವು ಮಿಷನ್ ರಂಜನ್ ದಾಸ್ ಮತ್ತು ಮಾಜಿ ಕೇಂದ್ರ ಸಚಿವ ರಾಮೇಶ್ವರ್ ತೇಲಿ ಅವರನ್ನು ಅಸ್ಸಾಂನಿಂದ ಕಣಕ್ಕಿಳಿಸಿದೆ.

ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೋವಾಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಾಲಿ ಸದಸ್ಯರು ಲೋಕಸಭೆಗೆ ಆಯ್ಕೆಯಾದ ಕಾರಣ ಹತ್ತು ಸ್ಥಾನಗಳು ತೆರವಾಗಿದ್ದವು.

ತೆಲಂಗಾಣ ಮತ್ತು ಒಡಿಶಾದ ಎರಡು ಸ್ಥಾನಗಳಿಗೂ ಉಪಚುನಾವಣೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.