ಎಎಪಿ ನಾಯಕ ಸಂಜಯ್ ಸಿಂಗ್ ಬಂಧನಕ್ಕೆ ಉತ್ತರ ಪ್ರದೇಶ ಕೋರ್ಟ್ ಆದೇಶ
ಎಎಪಿ ನಾಯಕ ಸಂಜಯ್ ಸಿಂಗ್ ಅವರನ್ನು ಆಗಸ್ಟ್ 28 ರಂದು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ.

ಸುಲ್ತಾನ್‌ಪುರ: ಎರಡು ದಶಕಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗದೇ ಇರುವುದಕ್ಕೆ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸುವಂತೆ ಉತ್ತರ ಪ್ರದೇಶದ ಸುಲ್ತಾನ್‌ಪುರ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.
ಎಎಪಿ ನಾಯಕ ಸಂಜಯ್ ಸಿಂಗ್ ಅವರನ್ನು ಆಗಸ್ಟ್ 28 ರಂದು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ.
ಆಗಸ್ಟ್ 13 ರಂದು ಸಿಂಗ್, ಎಸ್‌ಪಿ ನಾಯಕ ಅನೂಪ್ ಸಂದಾ ಮತ್ತು ಇತರ ನಾಲ್ವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದ್ದು, ಇಂದು ವಿಚಾರಣೆ ನಿಗದಿಪಡಿಸಲಾಗಿತ್ತು. ಆದರೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಆಗಸ್ಟ್ 28ರೊಳಗೆ ಎಲ್ಲ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರು ಆರೋಪಿಗಳ ಪರ ವಾದ ಮಂಡಿಸಿದ ಮದನ್ ಸಿಂಗ್, ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠದಲ್ಲಿ ಸಿಂಗ್ ಮತ್ತು ಸಂದಾ ಅವರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆಯನ್ನು ಆಗಸ್ಟ್ 22 ಕ್ಕೆ ನಿಗದಿಪಡಿಸಲಾಗಿದೆ.
ಜೂನ್ 19, 2001 ರಂದು ಎಸ್ಪಿ ಮಾಜಿ ಶಾಸಕ ಅನೂಪ್ ಸಂದಾ ಅವರ ನೇತೃತ್ವದಲ್ಲಿ ಕಳಪೆ ವಿದ್ಯುತ್ ಪೂರೈಕೆ ಖಂಡಿಸಿ ನಗರದ ಸಬ್ಜಿ ಮಂಡಿ ಪ್ರದೇಶಕ್ಕೆ ಸಮೀಪವಿರುವ ಮೇಲ್ಸೇತುವೆಯ ಬಳಿ ಪ್ರತಿಭಟನೆ ನಡೆಸಲಾಗಿತ್ತು.
ಈ ಪ್ರತಿಭಟನೆಯಲ್ಲಿ ಸಂಜಯ್ ಸಿಂಗ್, ಮಾಜಿ ಕೌನ್ಸಿಲರ್‌ಗಳಾದ ಕಮಲ್ ಶ್ರೀವಾಸ್ತವ್, ವಿಜಯ್ ಕುಮಾರ್, ಸಂತೋಷ್, ಸುಭಾಷ್ ಚೌಧರಿ ಅವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



