ದೆಹಲಿ: 'ಕೇಜ್ರಿವಾಲ್ ಆಯೇಂಗೆ' ಅಭಿಯಾನ ಆರಂಭಿಸಿದ ಎಎಪಿ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.

ನವದೆಹಲಿ: ಮುಂದಿನ ವರ್ಷ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷವು ಗುರುವಾರ 'ಕೇಜ್ರಿವಾಲ್ ಆಯೇಂಗೆ' ಅಭಿಯಾನವನ್ನು ಆರಂಭಿಸಿದ್ದು, ಸತತ ಮೂರನೇ ಅವಧಿಗೆ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರ ರಚಿಸಲು ಯತ್ನಿಸುತ್ತಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.
ಮುಂದಿನ ವರ್ಷ ನಡೆಯುವ ದೆಹಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಆಡಳಿತರೂಢ ಆಮ್ ಆದ್ಮಿ ಪಕ್ಷ, ದೆಹಲಿಯಾದ್ಯಂತ 'ಕೇಜ್ರಿವಾಲ್ ಆಯೇಂಗೆ' ಘೋಷಣೆಯನ್ನು ಹೊಂದಿರುವ ಹೋರ್ಡಿಂಗ್‌ಗಳನ್ನು ಸಹ ಹಾಕಿದೆ.
ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬರುತ್ತಾರೆ ಎಂದು ದೆಹಲಿಯ ಜನ ಕಾತರದಿಂದ ಕಾಯುತ್ತಿದ್ದಾರೆ ಎಂದು ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಮತ್ತು ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಹೋದಾಗಿನಿಂದ ದೆಹಲಿಯಲ್ಲಿ ಅನೇಕ ಕೆಲಸಗಳು ಸ್ಥಗಿತಗೊಂಡಿವೆ. ಅವರು ಜೈಲಿನಿಂದ ಬಿಡುಗಡೆಯಾದ ನಂತರ ದೆಹಲಿಯಲ್ಲಿ ಸ್ಥಗಿತಗೊಂಡಿರುವ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡು ಅನೇಕ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲಾಗುವುದು ಎಂದು ಸಾರ್ವಜನಿಕರು ನಂಬಿರುವುದಾಗಿ" ಪಾಠಕ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



