ದೇಶ

ಅಯೋಧ್ಯೆಯಲ್ಲಿ ಸಾಮೂಹಿಕ ಅತ್ಯಾಚಾರ: ಆರೋಪಿ ಎಸ್‌ಪಿ ನಾಯಕನ ಅಕ್ರಮ ಶಾಪಿಂಗ್ ಕಾಂಪ್ಲೆಕ್ಸ್ ನೆಲಸಮ

ಅಯೋಧ್ಯೆಯಲ್ಲಿ 12 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಯಿದ್ ಖಾನ್(65) ಅವರನ್ನು ಜುಲೈ 30 ರಂದು ಅವರ ಸೇವಕ ರಾಜು ಖಾನ್ ಅವರೊಂದಿಗೆ ಬಂಧಿಸಲಾಗಿತ್ತು.

ಅಯೋಧ್ಯೆಯಲ್ಲಿ ಸಾಮೂಹಿಕ ಅತ್ಯಾಚಾರ: ಆರೋಪಿ ಎಸ್‌ಪಿ ನಾಯಕನ ಅಕ್ರಮ ಶಾಪಿಂಗ್ ಕಾಂಪ್ಲೆಕ್ಸ್ ನೆಲಸಮ
ಶಾಪಿಂಗ್ ಕಾಂಪ್ಲೆಕ್ಸ್ ನೆಲಸಮ
Published On :

ಲಖನೌ: ಅತ್ಯಾಚಾರ ಆರೋಪಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಮೊಯಿದ್ ಖಾನ್ ಒಡೆತನದ ಅಕ್ರಮ ಬಹುಮಹಡಿ ಶಾಪಿಂಗ್ ಕಾಂಪ್ಲೆಕ್ಸ್ ಅನ್ನು ಅಯೋಧ್ಯೆ ಜಿಲ್ಲಾಡಳಿತ ಗುರುವಾರ ನೆಲಸಮಗೊಳಿಸಿದೆ.

ಸುಮಾರು 3 ಕೋಟಿ ಮೌಲ್ಯದ 4 ಸಾವಿರ ಚದರ ಅಡಿ ವಿಸ್ತೀರ್ಣದ ಕಟ್ಟಡವನ್ನು ನೆಲಸಮಗೊಳಿಸಲು ಮೂರು ಬುಲ್ಡೋಜರ್ ಮತ್ತು ಅಗೆಯುವ ಯಂತ್ರವನ್ನು ಬಳಸಿ, ಭಾರೀ ಭದ್ರತೆಯಲ್ಲಿ ಧ್ವಂಸಗೊಳಿಸಲಾಗಿದೆ.

ಅಯೋಧ್ಯೆಯಲ್ಲಿ 12 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಯಿದ್ ಖಾನ್(65) ಅವರನ್ನು ಜುಲೈ 30 ರಂದು ಅವರ ಸೇವಕ ರಾಜು ಖಾನ್ ಅವರೊಂದಿಗೆ ಬಂಧಿಸಲಾಗಿತ್ತು.

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತ ಬಾಲಕಿ ಆಗಸ್ಟ್ 7 ರಂದು ಲಖನೌನ ಕ್ವೀನ್ ಮೇರಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ ಬಂಧಿತರಾದ ಮೊಯಿದ್ ಖಾನ್ ಅವರ ಮತ್ತೊಂದು ಅಕ್ರಮ ಕಟ್ಟಡ, 3,000 ಚದರ ಅಡಿ ಪ್ರದೇಶದಲ್ಲಿ ನಿರ್ಮಿಸಲಾದ ಬೇಕರಿಯನ್ನು ಸಹ ಈ ತಿಂಗಳ ಆರಂಭದಲ್ಲಿ ಬುಲ್ಡೋಜ್ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.