ದೇಶ

ಮಹಾರಾಷ್ಟ್ರ: ಉಕ್ಕು ಕಾರ್ಖಾನೆಯ ಬಾಯ್ಲರ್ ಸ್ಫೋಟ; 22 ಕಾರ್ಮಿಕರಿಗೆ ಗಾಯ, ಮೂವರ ಸ್ಥಿತಿ ಚಿಂತಾಜನಕ!

ಉಕ್ಕಿನ ಕಾರ್ಖಾನೆಯಲ್ಲಿ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಕರಗಿದ ಕಬ್ಬಿಣ ಕಾರ್ಮಿಕರ ಮೇಲೆ ಬಿದ್ದಿದ್ದು ಹಲವರಿಗೆ ಗಂಭೀರ ಗಾಯಗಳಾಗಿದೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.

ಮಹಾರಾಷ್ಟ್ರ: ಉಕ್ಕು ಕಾರ್ಖಾನೆಯ ಬಾಯ್ಲರ್ ಸ್ಫೋಟ; 22 ಕಾರ್ಮಿಕರಿಗೆ ಗಾಯ, ಮೂವರ ಸ್ಥಿತಿ ಚಿಂತಾಜನಕ!
ಗಜ್ ಕೇಸರಿ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ — PTI
Published On :

ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿ ಇಂದು ಗಜ್ ಕೇಸರಿ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಲ್ಲಿ 22ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ.

ಉಕ್ಕಿನ ಕಾರ್ಖಾನೆಯಲ್ಲಿ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಕರಗಿದ ಕಬ್ಬಿಣ ಕಾರ್ಮಿಕರ ಮೇಲೆ ಬಿದ್ದಿದ್ದು ಹಲವರಿಗೆ ಗಂಭೀರ ಗಾಯಗಳಾಗಿದೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ. ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಕರಗಿದ ಕಬ್ಬಿಣವು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ಅವರು ಹೇಳಿದರು.

ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಾವರದಲ್ಲಿನ ಸ್ಕ್ರ್ಯಾಪ್‌ನಿಂದ ಸ್ಟೀಲ್ ರಾಡ್‌ಗಳನ್ನು ತಯಾರಿಸಲಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡಿರುವ ಕಾರ್ಮಿಕರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಕಂಪನಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.