ದೇವಸ್ಥಾನದ ವಿಗ್ರಹ ವಿರೂಪ: ತ್ರಿಪುರಾದಲ್ಲಿ 12 ಮನೆ, ವಾಹನಗಳಿಗೆ ಕಿಡಿಗೇಡಿಗಳಿಂದ ಬೆಂಕಿ
ಜಿರಾನಿಯಾ ಉಪವಿಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಈ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ಅಗರ್ತಲಾ: ಪಶ್ಚಿಮ ತ್ರಿಪುರಾದ ರಾಣೀರ್‌ಬಜಾರ್ ಪ್ರದೇಶದ ದೇವಸ್ಥಾನವೊಂದರಲ್ಲಿ ವಿಗ್ರಹವನ್ನು ವಿರೂಪಗೊಳಿಸಿರುವ ವಿಚಾರ ತಿಳಿದ ನಂತರ ಅಪರಿಚಿತ ವ್ಯಕ್ತಿಗಳು ಕನಿಷ್ಠ 12 ಮನೆಗಳು ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಜಿರಾನಿಯಾ ಉಪವಿಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಈ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಮತ್ತು ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.
"ಕೈತೂರ್ಬಾರಿಯಲ್ಲಿ ಕಾಳಿ ದೇವಿಯ ವಿಗ್ರಹವು ವಿರೂಪಗೊಂಡಿರುವುದು ಕಂಡುಬಂದ ನಂತರ ಭಾನುವಾರ ತಡರಾತ್ರಿ ರಾಣಿರ್‌ಬಜಾರ್‌ನಲ್ಲಿ ಸುಮಾರು 12 ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕೆಲವು ಮೋಟಾರ್‌ಸೈಕಲ್‌ಗಳು ಮತ್ತು ಪಿಕ್-ಅಪ್ ವ್ಯಾನ್‌ಗಳು ಸಹ ಸುಟ್ಟು ಹಾಕಿದ್ದಾರೆ" ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್(ಕಾನೂನು ಮತ್ತು ಆದೇಶ) ಅನಂತ ದಾಸ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಉದ್ರಿಕ್ತ ಗುಂಪನ್ನು ನೋಡಿದ ನಿವಾಸಿಗಳು ತಮ್ಮ ವಾಸಸ್ಥಳದಿಂದ ಓಡಿಹೋದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಉದ್ವಿಗ್ನತೆಯನ್ನು ಶಮನಗೊಳಿಸಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ದಾಸ್ ಹೇಳಿದ್ದಾರೆ.
ಪೊಲೀಸ್ ಮಹಾನಿರ್ದೇಶಕರು ಅನುರಾಗ್ ಧಂಕರ್ ಮತ್ತು ಪಶ್ಚಿಮ ತ್ರಿಪುರಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಕುಮಾರ್ ಅವರು ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
"ಆಸ್ತಿ ನಷ್ಟದ ಮೌಲ್ಯಮಾಪನ ಪೂರ್ಣಗೊಂಡ ನಂತರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸುತ್ತಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ" ಎಂದು ಅವರು ತಿಳಿಸಿದ್ದಾರೆ.
ಶಾಂತಿ ಭಂಗದ ಆತಂಕದ ಹಿನ್ನೆಲೆಯಲ್ಲಿ, ಆಗಸ್ಟ್ 26 ರಿಂದ 28 ರವರೆಗೆ ಪಶ್ಚಿಮ ತ್ರಿಪುರಾ ಜಿಲ್ಲೆಯ ಜಿರಾನಿಯಾ ಉಪವಿಭಾಗದಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಲ್ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



