ದೇಶ

ಜಾರ್ಖಂಡ್‌ ಮಾಜಿ CM ಚಂಪೈ ಸೊರೇನ್ ಆಗಸ್ಟ್ 30 ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ, ಚಂಪೈ ಸೊರೇನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗಿನ ಮಾತುಕತೆ ನಂತರ ಬಿಜೆಪಿ ಸೇರ್ಪಡೆ ದಿನಾಂಕ ಘೋಷಣೆ.

ಜಾರ್ಖಂಡ್‌ ಮಾಜಿ CM ಚಂಪೈ ಸೊರೇನ್ ಆಗಸ್ಟ್ 30 ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ
ಅಮಿತ್ ಶಾ ಅವರೊಂದಿಗೆ ಚಂಪೈ ಸೊರೇನ್ ಮತ್ತಿತರ ಚಿತ್ರ
Published On :

ನವದೆಹಲಿ: ಜಾರ್ಖಂಡ್‌ನ ಮಾಜಿ ಸಿಎಂ ಚಂಪೈ ಸೊರೇನ್ ಅವರು ಆಗಸ್ಟ್ 30 ರಂದು ರಾಂಚಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಲಿದ್ದಾರೆ.

ಸೋರೆನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಸಭೆಯ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ವಿಷಯನ್ನು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಹಿಮಂತ ಬಿಸ್ವಾ ಶರ್ಮಾ, "ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ, ಚಂಪೈ ಸೊರೇನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸ್ವಲ್ಪ ಸಮಯದ ಹಿಂದೆ ಭೇಟಿಯಾದರು. ಅವರು ಆಗಸ್ಟ್ 30 ರಂದು ರಾಂಚಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರಲಿದ್ದಾರೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.