ಯುಎಸ್ ಅಧ್ಯಕ್ಷ ಜೋ ಬೈಡನ್ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಉಕ್ರೇನ್, ಬಾಂಗ್ಲಾದೇಶ ಕುರಿತು ಚರ್ಚೆ
ಉಕ್ರೇನ್‌ನಲ್ಲಿ ನಡೆಯುತ್ತಿರುವ ಪರಿಸ್ಥಿತಿ, ಬಾಂಗ್ಲಾದೇಶದ ರಾಜಕೀಯ ವಾತಾವರಣದ ಬಗ್ಗೆ ಮಾತನಾಡಿದ್ದಾರೆ ಉಭಯ ನಾಯಕರು ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದೂರವಾಣಿಯೊಂದಿಗೆ ಮಾತನಾಡಿದ್ದು, ಉಭಯ ನಾಯಕರು ಪ್ರಮುಖ ಜಾಗತಿಕ ಮತ್ತು ಪ್ರಾದೇಶಿಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.
ಉಕ್ರೇನ್‌ನಲ್ಲಿ ನಡೆಯುತ್ತಿರುವ ಪರಿಸ್ಥಿತಿ, ಬಾಂಗ್ಲಾದೇಶದ ರಾಜಕೀಯ ವಾತಾವರಣದ ಬಗ್ಗೆ ಮಾತನಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ನರೇಂದ್ರ ಮೋದಿ, ಉಕ್ರೇನ್ ನಲ್ಲಿ ಪರಿಸ್ಥಿತಿ ಸೇರಿದಂತೆ ವಿವಿಧ ಜಾಗತಿಕ ಮತ್ತು ಪ್ರಾದೇಶಿಕ ವಿಚಾರಗಳ ಬಗ್ಗೆ ವಿವರವಾದ ಅಭಿಪ್ರಾಯಗಳನ್ನು ಹಂಚಿಕೊಂಡೆವು. ಶಾಂತಿ ಮತ್ತು ಸ್ಥಿರತೆ ಬೇಗ ಮರಳಲು ಭಾರತದ ಸಂಪೂರ್ಣ ಬೆಂಬಲವನ್ನು ಪುನರುಚ್ಚರಿಸಿರುವುದಾಗಿ ಹೇಳಿದ್ದಾರೆ.
ಉಭಯ ನಾಯಕರು ಬಾಂಗ್ಲಾದೇಶ ಬಗ್ಗೆಯೂ ಚರ್ಚೆ ನಡೆಸಿದ್ದು, ಸಹಜ ಪರಿಸ್ಥಿತಿ ಮತ್ತು ಅಲ್ಪಸಂಖ್ಯಾತರು ಪ್ರಮುಖವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವ ಮಹತ್ವವನ್ನು ಮೋದಿ ಹೇಳಿದ್ದಾರೆ. ಈ ಕಳವಳಗಳನ್ನು ಪರಿಹರಿಸಲು ತ್ವರಿತ ಕ್ರಮದ ಅಗತ್ಯವನ್ನು ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



