ದೇಶ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು

ಇಂದು ಬೆಳಗ್ಗೆ ನಾಲಾ ಅಂಚಿನಲ್ಲಿ ಚಿರತೆಯೊಂದು ಮೃತಪಟ್ಟಿರುವುದು ಪತ್ತೆಯಾಗಿದೆ. ಈ ಚೀತಾ ನೀರಿನಲ್ಲಿ ಮುಳುಗಿ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು
ಸಾಂದರ್ಭಿಕ ಚಿತ್ರ
Published On :

ಭೋಪಾಲ್: ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ(ಕೆಎನ್‌ಪಿ) ನಮೀಬಿಯಾದಿಂದ ತಂದ ಚೀತಾಗಳ ಸಾವಿನ ಸರಣಿ ಮುಂದುವರೆದಿದ್ದು, ಮಂಗಳವಾರ ಬೆಳಗ್ಗೆ ಗಂಡು ಚೀತಾ ಪವನ್ ನೀರಿನಲ್ಲಿ ಮುಳಗಿ ಮೃತಪಟ್ಟಿದೆ. ಇದರೊಂದಿಗೆ ಮಾರ್ಚ್ 2023 ರಿಂದ KNP ಯಲ್ಲಿ ಸಾವನ್ನಪ್ಪಿದ ಎಂಟನೇ ಆಫ್ರಿಕನ್ ಚಿರತೆಯಾಗಿದೆ.

ಇಂದು ಬೆಳಗ್ಗೆ ನಾಲಾ ಅಂಚಿನಲ್ಲಿ ಚಿರತೆಯೊಂದು ಮೃತಪಟ್ಟಿರುವುದು ಪತ್ತೆಯಾಗಿದೆ. ಈ ಚೀತಾ ನೀರಿನಲ್ಲಿ ಮುಳುಗಿ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ.

ರಾಜ್ಯ ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯ ಪ್ರಕಾರ, ಮಂಗಳವಾರ ಬೆಳಗ್ಗೆ 10.30 ರ ಸುಮಾರಿಗೆ ನಮೀಬಿಯಾದ ಗಂಡು ಚಿರತೆ ಪವನ್ ಯಾವುದೇ ಚಲನವಲನವಿಲ್ಲದೆ ಪೊದೆಗಳ ನಡುವೆ ನಾಲಾ ಅಂಚಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಮಳೆಯಿಂದಾಗಿ ನಾಲಾ ತುಂಬಿ ಹರಿಯುತ್ತಿದೆ.

ತಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಲಾಗಿದ್ದು, ಸೂಕ್ಷ್ಮವಾಗಿ ಪರಿಶೀಲಿಸಿದಾಗ, ತಲೆ ಸೇರಿದಂತೆ ದೇಹದ ಮುಂಭಾಗದ ಅರ್ಧ ಭಾಗವು ನೀರಿನೊಳಗೆ ಇರುವುದು ಕಂಡುಬಂದಿದೆ ಮತ್ತು ದೇಹದ ಮೇಲೆ ಎಲ್ಲಿಯೂ ಗಾಯಗಳು ಕಂಡುಬಂದಿಲ್ಲ. ಹೀಗಾಗಿ ಚೀತಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.

ಉಳಿದಿರುವ 13 ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದ ಚೀತಾಗಳಲ್ಲಿ ಪವನ್ ಏಕೈಕ ವಯಸ್ಕ ಚಿರತೆಯಾಗಿದ್ದು, ಕಳೆದ 7-8 ತಿಂಗಳುಗಳಿಂದ ಅರಣ್ಯಕ್ಕೆ ಬಿಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.