ದೇಶ

ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಕಾಂಗ್ರೆಸ್ ಕಾನೂನು ನೆರವು ಕೋಶದ ಮುಖ್ಯಸ್ಥ ರಾಜೀನಾಮೆ

ನಟಿಯೊಬ್ಬರ ಆರೋಪದ ನಂತರ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ನೆರವು ಕೋಶದ ಅಧ್ಯಕ್ಷ ಮತ್ತು ವಕೀಲರ ಕಾಂಗ್ರೆಸ್ ರಾಜ್ಯ ಸಮಿತಿಯ ಅಧ್ಯಕ್ಷ ವಿ ಎಸ್ ಚಂದ್ರಶೇಖರನ್ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಕಾಂಗ್ರೆಸ್ ಕಾನೂನು ನೆರವು ಕೋಶದ ಮುಖ್ಯಸ್ಥ ರಾಜೀನಾಮೆ
ಸಾಂದರ್ಭಿಕ ಚಿತ್ರ
Published On :

ತಿರುವನಂತಪುರ: ಕೇರಳದಲ್ಲಿ ಲೈಂಗಿಕ ಕಿರುಕುಳದ ಕರಾಳತೆ ದಿನದಿಂದ ದಿನಕ್ಕೆ ಹೆಚ್ಚೆಚ್ಚು ಬಯಲಾಗುತ್ತಿದೆ.

ಇದೀಗ ನಟಿಯೊಬ್ಬರ ಆರೋಪದ ನಂತರ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ನೆರವು ಕೋಶದ ಅಧ್ಯಕ್ಷ ಮತ್ತು ವಕೀಲರ ಕಾಂಗ್ರೆಸ್ ರಾಜ್ಯ ಸಮಿತಿಯ ಅಧ್ಯಕ್ಷ ವಿ ಎಸ್ ಚಂದ್ರಶೇಖರನ್ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಚಂದ್ರಶೇಖರನ್ ಅವರು ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ ವಕೀಲ ವಿ ಎಸ್ ಚಂದ್ರಶೇಖರನ್ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಕಾನೂನು ನೆರವು ಘಟಕದ ಅಧ್ಯಕ್ಷ ಮತ್ತು ವಕೀಲರ ಕಾಂಗ್ರೆಸ್ ರಾಜ್ಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕೆಪಿಸಿಸಿ ಹೇಳಿದೆ.

ನಟಿಯೊಬ್ಬರಿಂದ ಆರೋಪ ಎದುರಿಸುತ್ತಿರುವ ಚಂದ್ರಶೇಖರನ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಘೋಷಿಸಿದ ಒಂದು ದಿನದ ನಂತರ ಅವರು ರಾಜೀನಾಮೆ ನೀಡಿದ್ದಾರೆ.

ಇತ್ತೀಚಿನ ಫೇಸ್‌ಬುಕ್ ಪೋಸ್ಟ್‌ನಲ್ಲಿ, ನಟಿ ಕಾಂಗ್ರೆಸ್ ನಾಯಕನ ವಿರುದ್ಧ ಆರೋಪಗಳನ್ನು ಮಾಡಿದ್ದರು. ಅಲ್ಲದೇ ನಾಲ್ವರು ಮಲಯಾಳಂ ಚಲನಚಿತ್ರ ನಟರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.