ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಹತ್ಯೆ ಪ್ರಕರಣ: ಸಹಿಸಲು ಅಸಾಧ್ಯ- ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತು
ಪಿಟಿಐ ನೊಂದಿಗೆ ಮಾತನಾಡಿರುವ ರಾಷ್ಟ್ರಪತಿಗಳು, ಪ್ರಕರಣದ ಬಗ್ಗೆ ತಮ್ಮ ದಿಗ್ಭ್ರಮೆಯನ್ನು ವ್ಯಕ್ತಪಡಿಸಿದ್ದಾರೆ.

ಕೋಲ್ಕತ್ತ: ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣವನ್ನು ಸಹಿಸುವುದು ಅಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ಪಿಟಿಐ ನೊಂದಿಗೆ ಮಾತನಾಡಿರುವ ರಾಷ್ಟ್ರಪತಿಗಳು, ಪ್ರಕರಣದ ಬಗ್ಗೆ ತಮ್ಮ ದಿಗ್ಭ್ರಮೆಯನ್ನು ವ್ಯಕ್ತಪಡಿಸಿದ್ದಾರೆ. ಇಂತಹ ಪ್ರಕರಣಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿರುವ ರಾಷ್ಟ್ರಪತಿಗಳು, ಮಹಿಳೆಯರ ವಿರುದ್ಧದ ಇಂತಹ ಘೋರ ಅಪರಾಧಗಳನ್ನು ತಡೆಗಟ್ಟಲು ಸಾಮಾಜಿಕ ಪರಿಷ್ಕರಣೆಯ ತುರ್ತು ಅಗತ್ಯವಿದೆ ಎಂದು ಹೇಳಿದ್ದಾರೆ.
ಕೋಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿರುವ ರಾಷ್ಟ್ರಪತಿಗಳು, ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ತ್ವರಿತ ನ್ಯಾಯಕ್ಕಾಗಿ ಕರೆ ನೀಡಿದರು. ಮಹಿಳೆಯರ ಬಗೆಗಿನ ಸಾಮಾಜಿಕ ಧೋರಣೆಗಳನ್ನು ಬದಲಾಯಿಸುವ ಮತ್ತು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಅವರ ಸುರಕ್ಷತೆ ಮತ್ತು ಘನತೆಯನ್ನು ಖಾತ್ರಿಪಡಿಸುವ ಪ್ರಾಮುಖ್ಯತೆಯನ್ನು ಅವರು ಪುನರುಚ್ಚರಿಸಿದರು.
ಇತ್ತೀಚಿನ ಅಪರಾಧಕ್ಕೆ ಪ್ರತಿಕ್ರಿಯೆಯಾಗಿ ವಿದ್ಯಾರ್ಥಿಗಳು, ವೈದ್ಯರು ಮತ್ತು ನಾಗರಿಕರು ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಅಪರಾಧಿಗಳು ಬೇರೆಡೆ ಮುಕ್ತವಾಗಿ ತಿರುಗಾಡುವುದನ್ನು ಮುಂದುವರೆಸಿದ್ದಾರೆ ಎಂದು ರಾಷ್ಟ್ರಪತಿ ಮುರ್ಮು ಸಂದರ್ಶನದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. "ಯಾವುದೇ ಸುಸಂಸ್ಕೃತ ಸಮಾಜ ಹೆಣ್ಣುಮಕ್ಕಳು ಮತ್ತು ಸಹೋದರಿಯರನ್ನು ಇಂತಹ ದೌರ್ಜನ್ಯಕ್ಕೆ ಒಳಪಡಲು ಬಿಡುವುದಿಲ್ಲ" ಎಂದು ಅವರು ಒತ್ತಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



