ದೇಶ

ಮಹಾರಾಷ್ಟ್ರ: 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ, ಕೇಸ್ ದಾಖಲು

ಜೂನ್‌ನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಇತ್ತೀಚೆಗೆ ಬಾಲಕಿ ತನ್ನ ತಾಯಿಗೆ ನಡೆದ ಘಟನೆಯನ್ನು ವಿವರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರ: 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ, ಕೇಸ್ ದಾಖಲು
ಸಾಂದರ್ಭಿಕ ಚಿತ್ರ
Published On :

ಮುಂಬೈ: ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. 9 ವರ್ಷದ ಮಗಳ ಮೇಲೆ ಆಕೆಯ 30 ವರ್ಷದ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ದಿಂಡೋಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜೂನ್‌ನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಇತ್ತೀಚೆಗೆ ಬಾಲಕಿ ತನ್ನ ತಾಯಿಗೆ ನಡೆದ ಘಟನೆಯನ್ನು ವಿವರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಳಿಕ ತಾಯಿ ತನ್ನ ಮಗಳನ್ನು ದಿಂಡೋಶಿ ಪೊಲೀಸ್ ಠಾಣೆಗೆ ಕರೆದೊಯ್ದು ಆರೋಪಿ ಪತಿ ವಿರುದ್ಧ ದೂರು ನೀಡಿದ್ದಾರೆ.

ಆರೋಪಿ ವಿರುದ್ಧ BNS ನ ಸೆಕ್ಷನ್ 65 (2), 68 (A) ಮತ್ತು POCSO ಸೆಕ್ಷನ್ 4,10,12 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಅವರನ್ನು ಆಗಸ್ಟ್ 30 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.