ರಾಷ್ಟ್ರೀಯ ಭದ್ರತಾ ಪಡೆಯ (NSG) ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಬಿ. ಶ್ರೀನಿವಾಸನ್ ನೇಮಕ
ಶ್ರೀನಿವಾಸನ್ ಅವರನ್ನು ಎನ್‌ಎಸ್‌ಜಿ ಮಹಾ ನಿರ್ದೇಶಕರನ್ನಾಗಿ ನೇಮಿಸಲು ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅವರ ಅಧಿಕಾರ ಅವಧಿಯು 2027ರ ಆಗಸ್ಟ್ 31ರ ವರೆಗೆ ಇರಲಿದೆ' ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಿದೆ.

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಬಿ. ಶ್ರೀನಿವಾಸನ್ ಅವರನ್ನು ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರನ್ನಾಗಿ ಮಂಗಳವಾರ ನೇಮಿಸಲಾಗಿದೆ. ಶ್ರೀನಿವಾಸನ್ ಅವರು ಬಿಹಾರ ಕೆಡರ್‌ನ 1992ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದಾರೆ.
'ಶ್ರೀನಿವಾಸನ್ ಅವರನ್ನು ಎನ್‌ಎಸ್‌ಜಿ ಮಹಾ ನಿರ್ದೇಶಕರನ್ನಾಗಿ ನೇಮಿಸಲು ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅವರ ಅಧಿಕಾರ ಅವಧಿಯು 2027ರ ಆಗಸ್ಟ್ 31ರ ವರೆಗೆ ಇರಲಿದೆ' ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಿದೆ.
ಕ್ಯಾಬಿನೆಟ್ನ ನೇಮಕಾತಿ ಸಮಿತಿಯು ಶ್ರೀನಿವಾಸನ್ ಅವರನ್ನು ಎನ್ಎಸ್ ಜಿಯ ಮಹಾನಿರ್ದೇಶಕರಾಗಿ ನೇಮಕ ಮಾಡಲು ಅನುಮೋದನೆ ನೀಡಿದೆ, ಈ ಹುದ್ದೆಗೆ ಸೇರ್ಪಡೆಗೊಂಡ ದಿನಾಂಕದಿಂದ ಮತ್ತು ಆಗಸ್ಟ್ 31, 2027 ರವರೆಗೆ ಶ್ರೀನಿವಾಸನ್ ಎನ್ಎಸ್ಜಿಯ ಮಹಾನಿರ್ದೇಶಕರಾಗಿರಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಮಹಾನಿರ್ದೇಶಕರಾಗಿ ನಿಯೋಜಿಸಲಾದ ನಲಿನ್ ಪ್ರಭಾತ್ ನಿರ್ಗಮನದ ಬಳಿಕ ಎನ್‌ಎಸ್‌ಜಿ ಡೈರೆಕ್ಟರ್ ಜನರಲ್ ಆಗಿ ಬಿಹಾರ ಕೇಡರ್ನ 1992 ರ ಬ್ಯಾಚ್ ಐಪಿಎಸ್ ಅಧಿಕಾರಿ ಶ್ರೀನಿವಾಸನ್ ಅವರನ್ನು ನೇಮಕ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



