Bribery case: ಸುಕೇಶ್ ಚಂದ್ರಶೇಖರ್‌ಗೆ ಜಾಮೀನು; ಆದರೂ ಸೆರೆವಾಸ!
ಎಐಎಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್‌ಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.

ನವದೆಹಲಿ: 200 ಕೋಟಿ ರೂ ಸುಲಿಗೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣದಲ್ಲಿ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ಗೆ ಕೊನೆಗೂ ಜಾಮೀನು ಮಂಜೂರಾಗಿದ್ದು, ಆದರೂ ಆತನ ಸೆರೆವಾಸ ಮಾತ್ರ ಮುಂದುವರೆಯಲಿದೆ.
ಹೌದು.. ಎಐಎಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್‌ಗೆ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ದೆ ಅವರಿದ್ದ ವಿಶೇಷ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್ ಅನ್ನು ಶ್ಯೂರಿಟಿಯಾಗಿರಿಸಿಕೊಂಡು ಜಾಮೀನು ಮಂಜೂರು ಮಾಡಿದ್ದಾರೆ.
ಎಐಎಡಿಎಂಕೆ ಪಕ್ಷದ ಚಿಹ್ನೆಯನ್ನು ವಿ.ಕೆ. ಶಶಿಕಲಾ ಅವರ ಬಣಕ್ಕೆ ಕೊಡಿಸುವ ಸಂಬಂಧ ಚುನಾವಣಾ ಆಯೋಗದ ಅಧಿಕಾರಿಯೊಬ್ಬರಿಗೆ ಲಂಚ ಆಮಿಷ ಒಡ್ಡಲಾಗಿತ್ತು. ಈ ವಿಚಾರವಾಗಿ ಸುಖೇಶ್ ಮಧ್ಯಸ್ಥಿಕೆ ವಹಿಸಿದ್ದ ಎಂದು ಹೇಳಲಾಗಿದೆ. ಇದೇ ಪ್ರಕರಣದಲ್ಲಿ ಇದೀಗ ಸುಕೇಶ್ ಗೆ ಜಾಮೀನು ಮಂಜೂರಾಗಿದೆ.
ಸೆರೆವಾಸ ಮುಂದುವರಿಕೆ
ಬೇಲ್ ಸಿಕ್ಕರೂ ಸದ್ಯಕ್ಕೆ ಸುಕೇಶ್ ಹೊರಬರುವುದಿಲ್ಲ. ಏಕೆಂದರೆ ಬೇರೆ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಅವುಗಳ ವಿಚಾರಣೆ ನಡೆದ ಬಳಿಕ ಸುಕೇಶ್ ಸೆರೆವಾಸ ಅಂತ್ಯದ ಭವಿಷ್ಯ ತಿಳಿಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



