ದೇಶ

ಬಿಷ್ಣೋಯಿ ಗ್ಯಾಂಗ್‌ನಿಂದ 10 ಕೋಟಿ ರೂ. ಹಣಕ್ಕೆ ಬೇಡಿಕೆ, ಪ್ರಕರಣ ದಾಖಲು

ಬೆಲ್ತಾರಾ ರಸ್ತೆ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ಗುಪ್ತಾ ಅವರಿಗೆ ಹಣಕ್ಕಾಗಿ ಒತ್ತಾಯಿಸಿ ಪತ್ರ ಬಂದ ನಂತರ ಪೊಲೀಸರನ್ನು ಸಂಪರ್ಕಿಸಿದ್ದಾರೆ

ಬಿಷ್ಣೋಯಿ ಗ್ಯಾಂಗ್‌ನಿಂದ 10 ಕೋಟಿ ರೂ. ಹಣಕ್ಕೆ ಬೇಡಿಕೆ, ಪ್ರಕರಣ ದಾಖಲು
ಬಿಷ್ಣೋಯಿ ಗ್ಯಾಂಗ್‌
Published On :

ಬಲ್ಲಿಯಾ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯರಿಂದ 10 ಕೋಟಿ ರೂ. ಹಣದ ಬೇಡಿಕೆಯ ಕುರಿತು ಉತ್ತರ ಪ್ರದೇಶದ ಬಲ್ಲಿಯಾದ ನಗರ ಪಂಚಾಯತ್ ಮಾಜಿ ಅಧ್ಯಕ್ಷರು ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬೆಲ್ತಾರಾ ರಸ್ತೆ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ಗುಪ್ತಾ ಅವರಿಗೆ ಹಣಕ್ಕಾಗಿ ಒತ್ತಾಯಿಸಿ ಪತ್ರ ಬಂದ ನಂತರ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಉಭಾನ್ ಪೊಲೀಸ್ ಠಾಣೆಯ ಠಾಣಾಧಿಕಾರಿ ವಿಪಿನ್ ಸಿಂಗ್ ತಿಳಿಸಿದ್ದಾರೆ.

ಈ ಸಂಬಂಧ ಬಿ ಎನ್‌ಎಸ್‌ನ ಸೆಕ್ಷನ್ 351 (4) (ಅನಾಮಧೇಯ ಸಂವಹನದಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಿಚಿತ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವಿಪಿನ್ ಸಿಂಗ್ ಹೇಳಿದರು.

ಪೊಲೀಸರು ದೂರನ್ನು ಸ್ವೀಕರಿಸಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಸ್ರಾ ವಲಯದ ಸರ್ಕಲ್ ಆಫೀಸರ್ (ಸಿಒ) ಮೊಹಮ್ಮದ್ ಫಾಹಿಮ್ ಖುರೇಷಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಅಂಚೆ ಸೇವೆಯ ಮೂಲಕ ಪತ್ರ ಬಂದಿತ್ತು. ಅದರಲ್ಲಿ ಬಿಷ್ಣೋಯಿ ಗ್ಯಾಂಗ್ ಎಂದು ಹೇಳಿಕೊಳ್ಳುವ ಯಾರೋ ವ್ಯಕ್ತಿ 10 ಕೋಟಿ ರೂ. ಹಣವನ್ನು ಪಾವತಿಸುವಂತೆ ಕೇಳಿದ್ದರು ಎಂದು ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು. ಗುಪ್ತಾ ಉದ್ಯಮಿಯಾಗಿದ್ದು, ಅವರ ಪತ್ನಿ ರೇಣು ಗುಪ್ತಾ ಪ್ರಸ್ತುತ ಬೆಲ್ತಾರ ರಸ್ತೆ ನಗರ ಪಂಚಾಯತ್ ಅಧ್ಯಕ್ಷರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.