ದೇಶ

ತಾಜ್‌ಮಹಲ್‌ ಸ್ಫೋಟಿಸುವುದಾಗಿ ಹುಸಿ ಬಾಂಬ್‌ ಬೆದರಿಕೆ

ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಪ್ರೇಮಸೌಧ ತಾಜ್ ಮಹಲ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ.

ತಾಜ್‌ಮಹಲ್‌ ಸ್ಫೋಟಿಸುವುದಾಗಿ ಹುಸಿ ಬಾಂಬ್‌ ಬೆದರಿಕೆ
ತಾಜ್ ಮಹಲ್ ಅನ್ನು ತಪಾಸಣೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿ
Published On :

ಲಖನೌ: ತಾಜ್ ಮಹಲ್ ಸ್ಫೋಟಿಸುವುದಾಗಿ ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಗೆ ಮಂಗಳವಾರ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲನೆ ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಪ್ರೇಮಸೌಧ ತಾಜ್ ಮಹಲ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಸಹಾಯಕ ಪೊಲೀಸ್ ಕಮಿಷನರ್ ಸಯ್ಯದ್ ಅರೀಬ್ ಅಹ್ಮದ್ ಅವರು ತಿಳಿಸಿದ್ದಾರೆ.

"ತಾಜ್ ಮಹಲ್ ಅನ್ನು ಸ್ಫೋಟಿಸುವು ಬೆದರಿಕೆ ಇರುವ ಇಮೇಲ್ ಅನ್ನು ಉತ್ತರ ಪ್ರದೇಶ ಪ್ರವಾಸೋದ್ಯಮ ಕಚೇರಿ ಸ್ವೀಕರಿಸಿದೆ. ಈ ಕುರಿತು ಇಲಾಖೆಯವರು ನಮಗೆ ಮಾಹಿತಿ ನೀಡಿದ ನಂತರ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಇತರ ತಂಡಗಳು ತಾಜ್ ಮಹಲ್ ಅನ್ನು ಪರಿಶೀಲನೆ ನಡೆಸಿದ್ದು, ಇದು ಹುಸಿ ಬಾಂಬ್ ಬೆದರಿಕೆ ಎಂದು ಅಹ್ಮದ್ ಅವರು ANIಗೆ ತಿಳಿಸಿದ್ದಾರೆ.

ಈ ಸಂಬಂಧ ತಾಜಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ನಕಲಿ ಇಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.