ದೇಶ

ಉನ್ನಾವೋ ಅತ್ಯಾಚಾರ: ಬಿಜೆಪಿಯ ಉಚ್ಛಾಟಿತ ನಾಯಕ ಕುಲದೀಪ್ ಸೆಂಗಾರ್‌ಗೆ ಮಧ್ಯಂತರ ಜಾಮೀನು

ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಅಮಿತ್ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠ, ಶಿಕ್ಷೆಯನ್ನು ಸದ್ಯಕ್ಕೆ ಅಮಾನತುಗೊಳಿಸಿತು. ಅನಾರೋಗ್ಯದ ಕಾರಣ ಸೆಂಗಾರ್ ಅವರನ್ನು ಏಮ್ಸ್-ದೆಹಲಿಗೆ ದಾಖಲಿಸಬೇಕು ಮತ್ತು ಬಿಡುಗಡೆಯಾದ ನಂತರ ರಾಜಧಾನಿಯಲ್ಲೇ ಇರಬೇಕು ಎಂದು ನಿರ್ದೇಶಿಸಿತು.

ಉನ್ನಾವೋ ಅತ್ಯಾಚಾರ: ಬಿಜೆಪಿಯ ಉಚ್ಛಾಟಿತ ನಾಯಕ ಕುಲದೀಪ್ ಸೆಂಗಾರ್‌ಗೆ ಮಧ್ಯಂತರ ಜಾಮೀನು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: 2017ರಲ್ಲಿ ಉತ್ತರ ಪ್ರದೇಶದ ಉನ್ನಾವೊದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿಯ ಉಚ್ಛಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವೈದ್ಯಕೀಯ ಕಾರಣಗಳಿಗಾಗಿ ದೆಹಲಿ ಹೈಕೋರ್ಟ್ ಗುರುವಾರ ಎರಡು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಅಮಿತ್ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠ, ಶಿಕ್ಷೆಯನ್ನು ಸದ್ಯಕ್ಕೆ ಅಮಾನತುಗೊಳಿಸಿತು. ಅನಾರೋಗ್ಯದ ಕಾರಣ ಸೆಂಗಾರ್ ಅವರನ್ನು ಏಮ್ಸ್-ದೆಹಲಿಗೆ ದಾಖಲಿಸಬೇಕು ಮತ್ತು ಬಿಡುಗಡೆಯಾದ ನಂತರ ರಾಜಧಾನಿಯಲ್ಲೇ ಇರಬೇಕು ಎಂದು ನಿರ್ದೇಶಿಸಿತು.

ಪ್ರಕರಣದ ಇತಿಹಾಸ ಮತ್ತು ಅರ್ಜಿದಾರರ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ, ಅವರನ್ನು ಎರಡು ವಾರಗಳವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಮತ್ತು ಸಮಗ್ರ ವೈದ್ಯಕೀಯ ಪರಿಶೀಲನೆಗಾಗಿ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಬೇಕು ಎಂದು ನ್ಯಾಯಪೀಠ ಹೇಳಿತು.

ಏಮ್ಸ್‌ನ ವೈದ್ಯಕೀಯ ಮಂಡಳಿಯಿಂದ ವರದಿ ಕೇಳಿರುವ ನ್ಯಾಯಾಲಯ, ಡಿಸೆಂಬರ್ 20 ರಂದು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲೂ ಸೆಂಗಾರ್ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಅವರು ಸಲ್ಲಿಸಿರುವ ಅರ್ಜಿ ಇನ್ನೂ ಹೈಕೋರ್ಟ್‌ನ ಇನ್ನೊಂದು ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.