ಕೇಂದ್ರ ಸಚಿವ ಸಂಜಯ್ ಸೇಠ್‌ಗೆ ಜೀವ ಬೆದರಿಕೆ; 50 ಲಕ್ಷ ರೂ ಗೆ ಬೇಡಿಕೆ
ಸಂದೇಶ ಕಳುಹಿಸಿದ ದುಷ್ಕರ್ಮಿಗಳು, ಮೂರು ದಿನಗಳಲ್ಲಿ ಹಣ ನೀಡದಿದ್ದರೆ ತೀವ್ರ ಪರಿಮಾಮ ಎದುರಿಸಬೇಕಾಗುತ್ತದೆ ಬೆದರಿಕೆ ಹಾಕಿದ್ದಾರೆ.

ರಾಂಚಿ: ರಾಂಚಿ ಸಂಸದ ಹಾಗೂ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಅವರು ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳುವ ವೇಳೆ ಮೆಸೇಜ್ ಮೂಲಕ 50 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದಾರೆ.
ಸಂದೇಶ ಕಳುಹಿಸಿದ ದುಷ್ಕರ್ಮಿಗಳು, ಮೂರು ದಿನಗಳಲ್ಲಿ ಹಣ ನೀಡದಿದ್ದರೆ ತೀವ್ರ ಪರಿಮಾಮ ಎದುರಿಸಬೇಕಾಗುತ್ತದೆ ಬೆದರಿಕೆ ಹಾಕಿದ್ದಾರೆ. ಸೇಠ್ ಅವರ ಫೋನ್‌ಗೆ ಸಂದೇಶ ಬಂದಾಗ ಅವರು ದೆಹಲಿಯಲ್ಲಿದ್ದರು.
ಘಟನೆ ಕುರಿತು ಮಾತನಾಡಿದ ಅವರು, ನಾನು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಇಂದು ನಾನು ನನ್ನ ಕ್ಷೇತ್ರದಲ್ಲಿದ್ದೇನೆ. ಪೊಲೀಸರು ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ, ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ.
ಬೆದರಿಕೆಯ ನಂತರ, ಕೇಂದ್ರ ಸಚಿವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೆಹಲಿ ಮತ್ತು ಜಾರ್ಖಂಡ್ ಎರಡರಲ್ಲೂ ಈ ಕುರಿತು ತನಿಖೆ ನಡೆಯುತ್ತಿದೆ.
ಸೇಠ್ ಅವರಿಗೆ ಬೆದರಿಕೆ ಸಂದೇಶ ಬಂದ ನಂತರ ದೆಹಲಿ ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಕಮಿಷನರ್ ಸೇರಿದಂತೆ ಉನ್ನತ ಅಧಿಕಾರಿಗಳು ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ವಿವರಗಳನ್ನು ಸಂಗ್ರಹಿಸಿದರು.
ತಮ್ಮ ತನಿಖೆಯ ಸಮಯದಲ್ಲಿ, ದೆಹಲಿ ಪೊಲೀಸರು ಸಂದೇಶದ ಮೂಲವನ್ನು ಪತ್ತೆಹಚ್ಚಿದ್ದು, ಅದು ರಾಂಚಿಯ ಹೊಸಿರ್ ನಿಂದ ಬಂದಿದೆ. ನಂತರ, ದೆಹಲಿ ಪೊಲೀಸರು ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಅನುರಾಗ್ ಗುಪ್ತಾ ಅವರಿಗೆ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಗುಪ್ತಾ ಅವರು ಈ ಬಗ್ಗೆ ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸರು ಮತ್ತು ರಾಂಚಿ ಪೊಲೀಸರ ಜಂಟಿ ತಂಡವು ಕಂಕೆ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಿರ್‌ನಲ್ಲಿ ತನಿಖೆ ನಡೆಸುತ್ತಿದೆ. ಇಲ್ಲಿಯವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



