ಮಹಾಯುತಿ ಸರ್ಕಾರದ ಪ್ರಮಾಣ ವಚನ ವೇಳೆ 12 ಲಕ್ಷ ರೂ ಮೌಲ್ಯದ ವಸ್ತುಗಳು ಕಳವು!
ಚಿನ್ನದ ಸರಗಳು, ಫೋನ್ಗಳು ಮತ್ತು ಪರ್ಸ್ಗಳನ್ನು ಕಳ್ಳರು ಕದ್ದಿದ್ದಾರೆ. ಗೇಟ್ ಸಂಖ್ಯೆ ಎರಡರಿಂದ ಜನರು ಹೊರಹೋಗುತ್ತಿದ್ದಾಗ ಕಳ್ಳರು ಕಳಲು ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದರು.

ಮುಂಬೈ: ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಡಿಸೆಂಬರ್ 5ರಂದು ಮಹಾಯುತಿ ಸರ್ಕಾರದ ಪ್ರಮಾಣ ವಚನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ದೇವೇಂದ್ರ ಫಡ್ನವಿಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರೆ, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದಾಗ್ಯೂ, ಈ ಸಮಯದಲ್ಲಿ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿದ್ದು, ಬರೋಬ್ಬರಿ ಒಟ್ಟು 12 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.
ವಾಸ್ತವವಾಗಿ, ಕಳ್ಳತನಕ್ಕಾಗಿ ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಆಜಾದ್ ಮೈದಾನ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಇದರೊಂದಿಗೆ ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಯುತ್ತಿದೆ. ಚಿನ್ನದ ಸರಗಳು, ಫೋನ್ಗಳು ಮತ್ತು ಪರ್ಸ್ಗಳನ್ನು ಕಳ್ಳರು ಕದ್ದಿದ್ದಾರೆ. ಗೇಟ್ ಸಂಖ್ಯೆ ಎರಡರಿಂದ ಜನರು ಹೊರಹೋಗುತ್ತಿದ್ದಾಗ ಕಳ್ಳರು ಕಳಲು ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದರು. ಪೊಲೀಸ್ ಠಾಣೆ ಮತ್ತು ಅಪರಾಧ ವಿಭಾಗದ ಸಿಬ್ಬಂದಿ ಆರೋಪಿಯನ್ನು ಹಿಡಿಯಲು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಹೇಳಿದರು. 'ಕಾರ್ಯಕ್ರಮದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ.
ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಹಿರಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಶಿವಸೇನೆಯ ಏಕನಾಥ್ ಶಿಂಧೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಅಜಿತ್ ಪವಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಲ್ಲದೆ, ಉದ್ಯಮ, ಚಿತ್ರರಂಗ ಮತ್ತು ರಾಜಕೀಯದ ಪ್ರಮುಖರು ಉಪಸ್ಥಿತರಿದ್ದರು. ಆದರೆ, ಪ್ರಮಾಣ ವಚನ ಸ್ವೀಕಾರ ಸಮಾರಂಭದ ಭದ್ರತೆಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಯೋಜಿಸಲಾಗಿತ್ತು. ಹೀಗಿದ್ದರೂ 12 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನ ಹಂಚಿಕೆ ಗೊಂದಲ: ಮಹಾಯುತಿ ನಾಯಕರಿಗೆ ಖಾತೆ ಹಂಚಿಕೆ ಹಗ್ಗದ ಮೇಲಿನ ನಡಿಗೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


