ಜಮ್ಮು-ಕಾಶ್ಮೀರ: ಸಹೋದ್ಯೋಗಿಗೆ ಗುಂಡಿಕ್ಕಿ ಕೊಂದ ಪೊಲೀಸ್ ತಾನೂ ಆತ್ಮಹತ್ಯೆ
ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಸೋದರ ಸಂಬಂಧಿಯಾಗಿದ್ದು, ಹತ್ಯೆ ಹಾಗೂ ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಕಾಳಿ ಮಠ ದೇವಾಲಯದ ಬಳಿ ವಾಹನವೊಂದರಲ್ಲಿ ಇಬ್ಬರು ಪೊಲೀಸರ ಮೃತದೇಹಗಳು ಪತ್ತೆಯಾಗಿದ್ದು, ಮೃತದೇಹದ ಮೇಲೆ ವ ಗುಂಡೇಟಿನ ಗಾಯಗಳು ಪತ್ತೆಯಾಗಿವೆ.
ಇಬ್ಬರೂ ಪೊಲೀಸ್ ಸಿಬ್ಬಂದಿಗಳು ಸೋಪೋರ್‌ನಿಂದ ಉಧಂಪುರದ ತಲ್ವಾರದಲ್ಲಿರುವ ತರಬೇತಿ ಕೇಂದ್ರಕ್ಕೆ ತೆರಳುತ್ತಿದ್ದಾಗ ಬೆಳಗ್ಗೆ 6.30ರ ಸುಮಾರಿದೆ ಘಟನೆ ನಡೆದಿದೆ ಎಂದು ಎಸ್‌ಎಸ್‌ಪಿ ಉಧಂಪುರ ಅಮೋದ್ ಅಶೋಕ್ ನಾಗ್‌ಪುರೆ ಅವರು ಹೇಳಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆಯಲ್ಲಿ ಎಕೆ -47 ರೈಫಲ್ ಬಳಸಿರುವುದು ಸಾಬೀತಾಗಿದೆ. ಇಬ್ಬರು ಇದು ಸೋದರ ಸಂಬಂಧಿಯಾಗಿದ್ದು, ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.
ದಾಳಿಗೂ ಮುನ್ನ ಇಬ್ಬರ ನಡುವೆ ಜಗಳವಾಗಿದೆ. ಆರೋಪಿಯು ತನ್ನ ಎಕೆ 47 ಅಸಾಲ್ಟ್ ರೈಫಲ್ ಅನ್ನು ದಾಳಿಗೆ ಬಳಸಿದ್ದಾನೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯಗಳಾಗಿವೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಆಯ್ಕೆ ದರ್ಜೆಯ ಕಾನ್ಸ್ಟೇಬಲ್ ಪ್ರಾಣಾಪಾಯದಿಂದ ಪಾರಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಉಧಂಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಮೋದ್ ಅಶೋಕ್ ನಾಗ್ಪುರೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



