ಮಹಾರಾಷ್ಟ್ರ: ವಿಧಾನಸಭೆ ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆ
ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ನಾಮಪತ್ರ ಸಲ್ಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆಯನ್ನು ಸೋಮವಾರ ಸದನದಲ್ಲಿ ಔಪಚಾರಿಕವಾಗಿ ಘೋಷಿಸಲಾಯಿತು.
ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ನಾಮಪತ್ರ ಸಲ್ಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು.
ಮೂರು ದಿನಗಳ ವಿಶೇಷ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸ್ಥಾನ ಮತ್ತು ಉಪ ಸಭಾಪತಿ ಸ್ಥಾನವನ್ನು ಪ್ರತಿಪಕ್ಷ ಎಂವಿಎ ಕೋರಿದೆ.
ಈ ಮಧ್ಯೆ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ ಡಿಸೆಂಬರ್ 11 ರಂದು ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



