ದೆಹಲಿ ಚುನಾವಣೆ: 20 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ AAP; ಜಂಗ್‌ಪುರ ಕ್ಷೇತ್ರದಿಂದ ಮನೀಶ್ ಸಿಸೋಡಿಯಾ
ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು(AAP) ಇಂದು ಸೋಮವಾರ ತನ್ನ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.
ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.
ಈ ಪಟ್ಟಿಯಲ್ಲಿ ಜಿತೇಂದರ್ ಸಿಂಗ್ ಶುಂಟಿ(ಶಹದಾರದಿಂದ ಕಣಕ್ಕಿಳಿದಿದ್ದಾರೆ) ಮತ್ತು ಸುರೀಂದರ್ ಪಾಲ್ ಸಿಂಗ್ ಬಿಟ್ಟು (ತಿಮಾರ್‌ಪುರ್) ಅವರ ಹೆಸರುಗಳೂ ಸೇರಿವೆ, ಅವರು ಇತ್ತೀಚೆಗೆ ಬಿಜೆಪಿಯನ್ನು ತೊರೆದು ಎಎಪಿ ಸೇರಿದ್ದಾರೆ.
ಹಾಲಿ ಎಎಪಿ ಶಾಸಕ ಮತ್ತು ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಬದಲಿಗೆ ಷಂಟಿ ಅವರ ಕ್ಷೇತ್ರದಲ್ಲಿ ನಿಲ್ಲಿಸಿದರೆ, ಸದನದಲ್ಲಿ ಎಎಪಿಯ ಮುಖ್ಯ ಸಚೇತಕ ದಿಲೀಪ್ ಪಾಂಡೆ ಬದಲಿಗೆ ಸುರೀಂದರ್ ಪಾಲ್ ಸಿಂಗ್ ಬಿಟ್ಟು ಅವರನ್ನು ಕಣಕ್ಕಿಳಿಸಲಾಗಿದೆ.
ಎಎಪಿ ತನ್ನ ಮೊದಲ ಪಟ್ಟಿಯಲ್ಲಿ 11 ಅಭ್ಯರ್ಥಿಗಳನ್ನು ಘೋಷಿಸಿತ್ತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿಗೆ ಮುನ್ನ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


