ದೇಶ

ಜಮ್ಮು-ಕಾಶ್ಮೀರ: ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ IED ಪತ್ತೆ, ತಪ್ಪಿದ ದೊಡ್ಡ ದುರಂತ!

ಬಾರಾಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದ ಪಲ್ಹಲ್ಲಾನ್ ಎಂಬಲ್ಲಿ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದಾಗ ಅನುಮಾನಾಸ್ಪದ ವಸ್ತುವೊಂದನ್ನು ಗುರುತಿಸಿದ್ದಾರೆ.

ಜಮ್ಮು-ಕಾಶ್ಮೀರ: ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ IED ಪತ್ತೆ, ತಪ್ಪಿದ ದೊಡ್ಡ ದುರಂತ!
ಹೆದ್ದಾರಿಯಲ್ಲಿ ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿರುವುದು.
Published On :

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಪ್ರಬಲವಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸಕಾಲಿಕ ಪತ್ತೆಯೊಂದಿಗೆ ದೊಡ್ಡ ದುರಂತವನ್ನು ತಪ್ಪಿಸಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದ ಪಲ್ಹಲ್ಲಾನ್ ಎಂಬಲ್ಲಿ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದಾಗ ಅನುಮಾನಾಸ್ಪದ ವಸ್ತುವೊಂದನ್ನು ಗುರುತಿಸಿದ್ದಾರೆ.

ಪರಿಶೀಲನೆ ನಡೆಸಿದಾಗ ಶಂಕಾಸ್ಪದ ವಸ್ತು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಎಂಬುದ ದೃಢವಾಗಿದೆ. ಇದೀಗ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

ಬಾಂಬ್ ನಿಷ್ಕ್ರಿಯ ದಳವು ನಿಯಂತ್ರಿತ ಸ್ಫೋಟದಲ್ಲಿ ವಸ್ತುವನ್ನು ನಾಶಪಡಿಸಿದೆ, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.