ಉಪ ರಾಷ್ಟ್ರಪತಿ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಮುಂದು
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್(ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ), ಮತ್ತು ಸಮಾಜವಾದಿ ಪಕ್ಷ(ಎಸ್ಪಿ) ಸೇರಿದಂತೆ ಪ್ರತಿಪಕ್ಷಗಳ 70 ಸಂಸದರು ಈ ನಿರ್ಣಯವನ್ನು ಬೆಂಬಲಿಸಲಿದ್ದಾರೆ.

ನವದೆಹಲಿ: ಭಾರತೀಯ ಸಂವಿಧಾನದ 67(ಬಿ) ವಿಧಿಯಡಿಯಲ್ಲಿ ರಾಜ್ಯಸಭಾ ಅಧ್ಯಕ್ಷ ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ ಸಿದ್ಧತೆ ನಡೆಸುತ್ತಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್(ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ), ಮತ್ತು ಸಮಾಜವಾದಿ ಪಕ್ಷ(ಎಸ್ಪಿ) ಸೇರಿದಂತೆ ಪ್ರತಿಪಕ್ಷಗಳ 70 ಸಂಸದರು ಈ ನಿರ್ಣಯವನ್ನು ಬೆಂಬಲಿಸಲಿದ್ದಾರೆ. ಧಂಖರ್ ಅವರು ರಾಜ್ಯಸಭೆಯ ಕಲಾಪಗಳನ್ನು ನಿಭಾಯಿಸುವ ಬಗ್ಗೆ ಪ್ರತಿಪಕ್ಷಗಳು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಪಕ್ಷಪಾತಿಯಾಗಿದ್ದು, ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಇಂಡಿಯಾ ಬ್ಲಾಕ್ನ ಸಂಸದರು ಪದೇ ಪದೇ ಆರೋಪಿಸಿದ್ದಾರೆ. ಅವರು ತಮ್ಮ ಭಾಷಣಗಳಿಗೆ ಆಗಾಗ್ಗೆ ಅಡ್ಡಿಪಡಿಸುತ್ತಾರೆ, ಪ್ರಮುಖ ವಿಷಯಗಳ ಮೇಲಿನ ಚರ್ಚೆಯನ್ನು ನಿರ್ಬಂಧಿಸುತ್ತಾರೆ ಮತ್ತು ಮೇಲ್ಮನೆಯಲ್ಲಿ ವಿವಾದಾತ್ಮಕ ಚರ್ಚೆಗಳ ಸಮಯದಲ್ಲಿ ಸರ್ಕಾರದ ಪರವಾಗಿರುತ್ತಾರೆ ಎಂದು ಪ್ರತಿಪಕ್ಷಗಳ ಸಂಸದರು ಆರೋಪಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ, ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಮುಂದಾಗಿವೆ ಎಂದು ವರದಿಗಳು ತಿಳಿಸಿವೆ.
ಬಜೆಟ್ ಅಧಿವೇಶನದಲ್ಲಿ, ವಿರೋಧ ಪಕ್ಷದ ಸಂಸದರು ರಾಜ್ಯಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಕಡಿಮೆ ಸಮಯ ನೀಡಿದ ಬಗ್ಗೆ ಮತ್ತು ಸ್ಥಳಾವಕಾಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ ಸ್ವಿಚ್ ಆಫ್ ಮಾಡಿರುವ ಆರೋಪ ಸೇರಿದಂತೆ ಪದೇ ಪದೇ ಭಾಷಣಕ್ಕೆ ಅಡ್ಡಿಪಡಿಸಿದ ನಿದರ್ಶನಗಳನ್ನು ವಿರೋಧ ಪಕ್ಷದ ಸಂಸದರು ಎತ್ತಿ ತೋರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



