ಉಪ ರಾಷ್ಟ್ರಪತಿ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳಿಂದ ನೋಟಿಸ್
ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ನಾಸೀರ್ ಹುಸೇನ್ ಅವರು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಅವರಿಗೆ ನೋಟಿಸ್ ಸಲ್ಲಿಸಿದ್ದಾರೆ.

ನವದೆಹಲಿ: ಸದನವನ್ನು ಪಕ್ಷಾತೀತವಾಗಿ ನಡೆಸದ ಆರೋಪದ ಮೇಲೆ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ಪ್ರತಿಪಕ್ಷಗಳು ಮಂಗಳವಾರ ನೋಟಿಸ್ ಸಲ್ಲಿಸಿವೆ.
ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ನಾಸೀರ್ ಹುಸೇನ್ ಅವರು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಅವರಿಗೆ ನೋಟಿಸ್ ಸಲ್ಲಿಸಿದ್ದಾರೆ.
ಉಪ ರಾಷ್ಟ್ರಪತಿ ಧಂಖರ್ ಅವರು ರಾಜ್ಯಸಭೆಯ ಪದನಿಮಿತ್ತ ಸಭಾಧ್ಯಕ್ಷರಾಗಿದ್ದಾರೆ.
ಕಾಂಗ್ರೆಸ್, ಆರ್‌ಜೆಡಿ, ಟಿಎಂಸಿ, ಸಿಪಿಐ, ಸಿಪಿಐ-ಎಂ, ಜೆಎಂಎಂ, ಎಎಪಿ, ಡಿಎಂಕೆ ಸೇರಿದಂತೆ ಸುಮಾರು 60 ವಿರೋಧ ಪಕ್ಷದ ಸಂಸದರು ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಕಾಂಗ್ರೆಸ್‌ನ ಉನ್ನತ ನಾಯಕರು ನೋಟಿಸ್‌ಗೆ ಸಹಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಿವಿಧ ವಿರೋಧ ಪಕ್ಷಗಳ ಸದನದ ನಾಯಕರು ಸಹ ಸಹಿ ಮಾಡಿಲ್ಲ ಎಂದು ಮೂಲಗಳು ತಿಳಿಸಿವೆ.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಪಕ್ಷಪಾತಿಯಾಗಿದ್ದು, ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಇಂಡಿಯಾ ಬ್ಲಾಕ್‌ನ ಸಂಸದರು ಪದೇ ಪದೇ ಆರೋಪಿಸಿದ್ದಾರೆ. ಅವರು ತಮ್ಮ ಭಾಷಣಗಳಿಗೆ ಆಗಾಗ್ಗೆ ಅಡ್ಡಿಪಡಿಸುತ್ತಾರೆ, ಪ್ರಮುಖ ವಿಷಯಗಳ ಮೇಲಿನ ಚರ್ಚೆಯನ್ನು ನಿರ್ಬಂಧಿಸುತ್ತಾರೆ ಮತ್ತು ಮೇಲ್ಮನೆಯಲ್ಲಿ ವಿವಾದಾತ್ಮಕ ಚರ್ಚೆಗಳ ಸಮಯದಲ್ಲಿ ಸರ್ಕಾರದ ಪರವಾಗಿರುತ್ತಾರೆ ಎಂದು ಪ್ರತಿಪಕ್ಷಗಳ ಸಂಸದರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



