ಜಮ್ಮುವಿನಲ್ಲಿರುವ ರೋಹಿಂಗ್ಯಾ ನಿರಾಶ್ರಿತರಿಗೆ ನೀರು-ವಿದ್ಯುತ್ ಒದಗಿಸುವುದು ನಮ್ಮ ಜವಾಬ್ದಾರಿ: ಫಾರೂಕ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರದಲ್ಲಿ 13,700ಕ್ಕೂ ಹೆಚ್ಚು ವಿದೇಶಿ ನಿರಾಶ್ರಿತರು ನೆಲೆಸಿದ್ದಾರೆ. ಅವರಲ್ಲಿ ಹೆಚ್ಚಿನವರು ರೋಹಿಂಗ್ಯಾ (ಮ್ಯಾನ್ಮಾರ್‌ನಿಂದ ಬಂದ ಅಕ್ರಮ ವಲಸಿಗರು) ಮತ್ತು ಬಾಂಗ್ಲಾದೇಶಿ ಪ್ರಜೆಗಳು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿರುವ ರೋಹಿಂಗ್ಯಾ ನಿರಾಶ್ರಿತರಿಗೆ ನೀರು ಮತ್ತು ವಿದ್ಯುತ್‌ನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಭಾರತ ಸರ್ಕಾರ ಈ ನಿರಾಶ್ರಿತರನ್ನು ಇಲ್ಲಿಗೆ ಕಳುಹಿಸಿದೆ. ನಾವು ಅವರನ್ನು ಕರೆತಂದಿಲ್ಲ. ಅವರು ಇಲ್ಲಿರುವವರೆಗೂ ಅವರಿಗೆ ನೀರು, ವಿದ್ಯುತ್ ಒದಗಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.
ಜಮ್ಮು ನಗರದಲ್ಲಿ ರೊಹಿಂಗ್ಯಾಗಳು ಮತ್ತು ಬಾಂಗ್ಲಾದೇಶೀಯರ ನೆಲೆಯನ್ನು ರಾಜಕೀಯ ಪಿತೂರಿ ಎಂದು ಬಿಜೆಪಿ ಬಣ್ಣಿಸಿದ್ದು ಈ ಬಗ್ಗೆ ಸಿಬಿಐ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿದ ಒಂದು ದಿನದ ನಂತರ ಫಾರೂಕ್ ಅಬ್ದುಲ್ಲಾ ಈ ಹೇಳಿಕೆ ನೀಡಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ 13,700ಕ್ಕೂ ಹೆಚ್ಚು ವಿದೇಶಿ ನಿರಾಶ್ರಿತರು ನೆಲೆಸಿದ್ದಾರೆ.
ಅವರಲ್ಲಿ ಹೆಚ್ಚಿನವರು ರೋಹಿಂಗ್ಯಾ (ಮ್ಯಾನ್ಮಾರ್‌ನಿಂದ ಬಂದ ಅಕ್ರಮ ವಲಸಿಗರು) ಮತ್ತು ಬಾಂಗ್ಲಾದೇಶಿ ಪ್ರಜೆಗಳು. 2008 ಮತ್ತು 2016ರ ನಡುವೆ ಅವರ ಸಂಖ್ಯೆ 6,000ಕ್ಕಿಂತ ಹೆಚ್ಚು ಹೆಚ್ಚಾಗಿದೆ. ಮಾರ್ಚ್ 2021ರಲ್ಲಿ, ಜಮ್ಮು ನಗರದಲ್ಲಿ ಪರಿಶೀಲನೆ ಕಾರ್ಯಾಚರಣೆಯಲ್ಲಿ 270ಕ್ಕೂ ಹೆಚ್ಚು ರೋಹಿಂಗ್ಯಾಗಳನ್ನು ಪೊಲೀಸರು ಬಂಧಿಸಿದರು. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅಕ್ರಮವಾಗಿ ವಾಸಿಸುತ್ತಿರುವುದನ್ನು ಪತ್ತೆ ಹಚ್ಚಿ ಕತ್ರಾ ಉಪ ಜೈಲಿನಲ್ಲಿರುವ ಹಿಡುವಳಿ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸಬೇಕೆಂದು ಬಲವಾಗಿ ಪ್ರತಿಪಾದಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕೇವಲ ಒಂದು ಅಧಿಕಾರ ನಡೆಯಬೇಕು. ಇಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ನಡೆಯಲ್ಲ ಎಂದು ಹೇಳಿದರು. ರಾಜ್ಯ ಸ್ಥಾನಮಾನ ಮರುಸ್ಥಾಪಿಸಲಾಗುವುದು. ಇದು ಭಾರತ ಸರ್ಕಾರದ ಭರವಸೆ ಮತ್ತು ಇದನ್ನು ಸುಪ್ರೀಂ ಕೋರ್ಟ್‌ನ ಮುಂದೆಯೂ ಮಾಡಲಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಫಾರೂಕ್ ಅಬ್ದುಲ್ಲಾ, ಭಾರತ ಸರ್ಕಾರ ಈ ವಿಷಯದ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



